ಬೆಂಗಳೂರು: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ಡಿಒ) ವತಿಯಿಂದ ರಾಜ್ಯದಲ್ಲಿ ನಿರ್ಮಾಣವಾದ 3 ವೈದ್ಯಕೀಯ ಆಕ್ಸಿಜನ್ ಘಟಕಗಳು ಈ ತಿಂಗಳಾಂತ್ಯಕ್ಕೆ ಕಾರ್ಯನಿರ್ವಹಣೆ ಆರಂಭಿಸಲಿದೆ.
ಈ ಘಟಕಗಳು ಕೈಗೆಟಕುವ ದರದಲ್ಲಿ ಆಕ್ಸಿಜನ್ ಉತ್ಪತ್ತಿ ಮಾಡಲಿವೆ. ಕೊಪ್ಪಳ ವೈದ್ಯಕೀಯ ವಿಜ್ಞಾನ ಸಂಸ್ಥೆ ಮತ್ತು ಕಲ್ಬುರ್ಗಿ ಇಎಸ್ಐ ಆಸ್ಪತ್ರೆಗಳಲ್ಲಿ ಘಟಕ ನಿರ್ಮಾಣ ಕಾರ್ಯ ಮುಕ್ತಾಯವಾಗಿದೆ. ಮೂರನೇ ಘಟಕ ಬೆಂಗಳೂರಿನ ಸಿ ವಿ ರಾಮನ್ ಕೇಂದ್ರದಲ್ಲಿ ತಯಾರಾಗುತ್ತಿದ್ದು, ಈ ವಾರಾಂತ್ಯಕ್ಕೆ ಅದನ್ನು ಸೇವೆಗೆ ಬಿಟ್ಟುಕೊಡಲಾಗುವುದು ಎಂದು ಡಿಆರ್ಡಿಒ ಅಧಿಕಾರಿಗಳು ತಿಳಿಸಿದ್ದಾರೆ.
ಈ ಮೂರೂ ಘಟಕಗಳಲ್ಲಿ ಆಕ್ಸಿಜನ್ ಟ್ಯಾಂಕ್ ಮತ್ತು ಕಂಪ್ರೆಸರ್, ವಿದ್ಯುತ್ ಉಪಕರಣಗಳು ಇರಲಿವೆ. ಪ್ರತಿ ನಿಮಿಷಕ್ಕೆ ಈ ಘಟಕಗಳು ಸಾವಿರ ಲೀ. ವರೆಗೆ ಆಕ್ಸಿಜನ್ ಉತ್ಪಾದನೆ ಮಾಡಲಿವೆ. ಇವುಗಳಲ್ಲಿ ಆಕ್ಸಿಜನ್ ತಯಾರಿಕೆಗೆ ಡಿಆರ್ಡಿಒ ಸಿದ್ಧಪಡಿಸಿದ ತಂತ್ರಜ್ಞಾನವನ್ನೇ ಬಳಕೆ ಮಾಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.