ಮಂಗಳೂರು: ಕೇಶವ ಸ್ಮೃತಿ ಸಂವರ್ಧನ ಸಮಿತಿ ಹಾಗೂ ವಿಶ್ವ ಹಿಂದು ಪರಿಷದ್ ಭಜರಂಗದಳ ಅಡ್ಯಾರ್ ವೀರಾಂಜನೇಯ ಶಾಖೆಯಿಂದ ಅಡ್ಯಾರ್ ನ ವೀರಾಂಜನೇಯ ಮಂದಿರದಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ನಡೆಸಲಾಯಿತು.
ಈ ರಕ್ತದಾನ ಶಿಬಿರವನ್ನು ನಿನ್ನೆ ಬೆಳಗ್ಗೆ 9:30 ರಿಂದ ಮಧ್ಯಾಹ್ನ ಒಂದು ಗಂಟೆಯವರೆಗೆ ನಡೆಸಲಾಯಿತು. ಈ ಕಾರ್ಯಕ್ರಮವನ್ನು ಕೋವಿಡ್ ನಿಯಮಾವಳಿಯಂತೆ ನಡೆಸಲಾಗಿದ್ದು, ರಕ್ತದಾನಿಗಳು ಮತ್ತು ಆಯೋಜಕರು ಸಾಮಾಜಿಕ ಅಂತರ ಮತ್ತು ಮಾಸ್ಕ್ ಧರಿಸುವ ಮೂಲಕ ಸಹಕರಿಸಿದರು.
ಲಾಕ್ ಡೌನ್ ನ ಈ ತುರ್ತು ಸಂದರ್ಭದಲ್ಲಿ ಆಸ್ಪತ್ರೆಗಳಲ್ಲಿ ರಕ್ತದ ಕೊರತೆ ಉಂಟಾಗದಿರಲು ಈ ರಕ್ತದಾನ ಶಿಬಿರವನ್ನು ಕೈಗೊಳ್ಳಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ.
ಶಿಬಿರದಲ್ಲಿ ಒಟ್ಟು 78 ಜನರು ರಕ್ತದಾನ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.