ಬೆಂಗಳೂರು: ರಾಜ್ಯದಲ್ಲಿನ ಕೊರೋನಾ ಪರಿಸ್ಥಿತಿ ನಿಯಂತ್ರಣ ಹಿನ್ನೆಲೆಯಲ್ಲಿ ದಕ್ಷಿಣ ಕೊರಿಯ ಮೂಲದ ಸಂಸ್ಥೆ ಸಿಯೋಲ್ ಸೆಮಿಕಂಡಕ್ಟರ್ ಅಗತ್ಯ ವೈದ್ಯಕೀಯ ವಸ್ತುಗಳನ್ನು ಉಚಿತವಾಗಿ ಒದಗಿಸಿದೆ.
ಈ ಸಂಬಂಧ ಸಿಯೋಲ್ ಸೆಮಿಕಂಡಕ್ಟರ್ನ ಅಧಿಕಾರಿಗಳು ಡಿಸಿಎಂ ಡಾ ಅಶ್ವತ್ಥ್ ನಾರಾಯಣ್ ಅವರನ್ನು ಭೇಟಿಯಾಗಿ ಸಾಂಕೇತಿಕವಾಗಿ ಕೆಲವು ವೈದ್ಯಕೀಯ ಸಲಕರಣೆಗಳ ಹಸ್ತಾಂತರ ಪ್ರಕ್ರಿಯೆ ನಡೆಸಿದರು.
ಈ ಬಗ್ಗೆ ಮಾತನಾಡಿದ ಅಶ್ವತ್ಥ್ ನಾರಾಯಣ್, ರಾಜ್ಯ ಸದ್ಯ ಕೊರೋನಾ ನಿಯಂತ್ರಣ ಹಿನ್ನೆಲೆಯಲ್ಲಿ ದೊಡ್ಡ ಹೋರಾಟ ನಡೆಸುತ್ತಿದೆ. ಈ ಹೋರಾಟಕ್ಕೆ ರಾಜ್ಯ ಸರ್ಕಾರದ ಜೊತೆಗೆ ಸರ್ಕಾರಿ ಸಂಸ್ಥೆಗಳು ಸಹ ಕೈಜೋಡಿಸುತ್ತಿರುವುದು ಸಂತಸದ ವಿಚಾರ. ಸಿಯೋಲ್ ಸೆಮಿಕಂಡಕ್ಟರ್ ಸಂಸ್ಥೆ ಕೊರೋನಾ ನಿರ್ವಹಣೆಗಾಗಿ ರಾಜ್ಯಕ್ಕೆ 30 ಸಾವಿರ ಕೆ-94 ಮಾಸ್ಕ್, 20 ಸಾವಿರ ಮೆಡಿಕಲ್ ಗ್ಲೌಸ್, 2500 ವಾಯು ಸಂಸ್ಕರಣಾ ಸಲಕರಣೆ, 100 ಪಿಪಿಇ ಕಿಟ್ಗಳನ್ನು ನೀಡುವ ಮೂಲಕ ನೆರವಾಗಿದೆ ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.