ಬೆಂಗಳೂರು: ರಾಜ್ಯದಲ್ಲಿ ಮುಂದಿನ ಎರಡು ತಿಂಗಳುಗಳೊಳಗಾಗಿ 500 ಕಡೆಗಳಲ್ಲಿ ಆಮ್ಲಜನಕ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲಾಗುತ್ತದೆ ಎಂದು ಡಿಸಿಎಂ ಡಾ ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ.
ರಾಜ್ಯದ ಪ್ರತಿಯೊಂದು ಆರೋಗ್ಯ ಕೇಂದ್ರ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಆಮ್ಲಜನಕ ಉತ್ಪಾದನಾ ಘಟಕವನ್ನು ಸ್ಥಾಪಿಸಲಾಗುವುದು. ಜೊತೆಗೆ ಈ ಆಸ್ಪತ್ರೆಗಳಲ್ಲಿ ಐಸಿಯು ವ್ಯವಸ್ಥೆ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.
ಒಂದು ಆಮ್ಲಜನಕ ಹಾಸಿಗೆಗೆ 20 ಸಾವಿರ ಲೀ. ಗಳಷ್ಟು ಆಮ್ಲಜನಕ ಬೇಕಾಗುತ್ತದೆ. ಈ ಲೆಕ್ಕಾಚಾರದಂತೆ ರಾಜ್ಯದಲ್ಲಿ ಎಲ್ಲಾ ಆಮ್ಲಜನಕ ಹಾಸಿಗೆಗಳಿಗೆ ಆಮ್ಲಜನಕ ಒದಗಿಸಿ ಉಳಿಯುವಷ್ಟು ಆಮ್ಲಜನಕ ನಮ್ಮಲ್ಲಿದೆ. ಮೂರನೇ ಕೊರೋನಾ ಅಲೆಯನ್ನು ಗಮನದಲ್ಲಿಟ್ಟುಕೊಂಡು ಮತ್ತಷ್ಟು ಅಗತ್ಯ ವೈದ್ಯಕೀಯ ಮೂಲಸೌಕರ್ಯಗಳನ್ನು ಕಲ್ಪಿಸಲಾಗುತ್ತಿದೆ. ಮತ್ತಷ್ಟು ಆಮ್ಲಜನಕ ಹಾಸಿಗೆಗಳು, ವೆಂಟಿಲೇಟರ್ಗಳನ್ನು ಹೆಚ್ಚಿಸಲು ಸರ್ಕಾರ ಕ್ರಮ ಕೈಗೊಂಡಿದೆ ಎಂದು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.