ಬೆಂಗಳೂರು: ರಾಜ್ಯದ ಗ್ರಾಮೀಣ ಭಾಗಗಳಲ್ಲಿಯೂ ಕೊರೋನಾ ಸೋಂಕು ಹೆಚ್ಚಾಗುತ್ತಿದ್ದು, ಇದರ ವಿರುದ್ಧ ಹೋರಾಟ ನಡೆಸಲು ಸರ್ಕಾರ ಪೂರಕ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.
ರಾಜ್ಯದಲ್ಲಿ ಕೊರೋನಾ ನಿಯಂತ್ರಣ ಹಿನ್ನೆಲೆಯಲ್ಲಿ ಸರ್ಕಾರದ ಜೊತೆಗೆ ಖಾಸಗಿ ಸಂಸ್ಥೆಗಳೂ ಸಹ ಸಹಭಾಗಿತ್ವ ನೀಡುತ್ತಿದ್ದು, ಈ ಹಿನ್ನೆಲೆಯಲ್ಲಿ ಅಂತಹ ಸಂಸ್ಥೆಗಳನ್ನು ಸಿಎಂ ಶ್ಲಾಘಿಸಿದ್ದಾರೆ.
ಬೆಂಗಳೂರಿನಲ್ಲಿ ವೋಲ್ವೋ ಗ್ರೂಪ್ ಮತ್ತು ಐಕಿಯಾ ಗ್ರೂಪ್ಗಳ ಸಹಭಾಗಿತ್ವದಲ್ಲಿ 100 ಹಾಸಿಗೆಗಳ ಕೊರೋನಾ ಕೇರ್ ಸೆಂಟರ್ ಆರಂಭಿಸಲಾಗಿದೆ. ಕಷ್ಟದ ಸಮಯದಲ್ಲಿ ಈ ಸಂಸ್ಥೆಗಳು ನಮಗೆ ನೀಡುತ್ತಿರುವ ಬೆಂಬಲವನ್ನು ನಾವು ಗುರುತಿಸಿದ್ದೇವೆ ಎಂದು ತಿಳಿಸಿದ್ದಾರೆ.
ಹಾಗೆಯೇ ಸೋಂಕಿನ ಈ ಸಂಕಷ್ಟದ ಅವಧಿಯಲ್ಲಿ ರಾಜ್ಯದ ಸಾಮಾನ್ಯ ಜನರನ್ನು ಗಮನದಲ್ಲಿಟ್ಟುಕೊಂಡು 1250 ಕೋಟಿ ರೂ. ಗಳ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಾಗಿದೆ. ಹಾಗೆಯೇ ಬ್ಲ್ಯಾಕ್ ಫಂಗಸ್ ಸೋಂಕಿತರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಒದಗಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ ಎಂದು ಸಿಎಂ ತಿಳಿಸಿದ್ದಾರೆ.
'ಬ್ಲ್ಯಾಕ್ ಫಂಗಸ್ ಸೋಂಕಿಗೆ ಜಿಲ್ಲಾಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲು ತೀರ್ಮಾನಿಸಲಾಗಿದೆ. ಸಾರ್ವಜನಿಕರು ಕೋವಿಡ್ ಹರಡುವಿಕೆ ತಡೆಯಲು ಮಾಸ್ಕ್ ಧರಿಸುವುದು,ಸಾಮಾಜಿಕ ಅಂತರ ಕಾಪಾಡುವುದು ಹಾಗೂ ವೈಯಕ್ತಿಕ ಸ್ವಚ್ಛತೆೆ ಕಡೆಗೆ ಹೆಚ್ಚಿನ ಗಮನಹರಿಸಿ, ಜಾಗರೂಕತೆಯಿಂದ ಇರಬೇಕು ಎಂದು ವಿನಂತಿಸುತ್ತೇನೆ' : ಮುಖ್ಯಮಂತ್ರಿ @BSYBJP
— CM of Karnataka (@CMofKarnataka) May 21, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.