ಬಲ್ಲಿಯಾ: ದೇಶದಲ್ಲಿ ಸುಮಾರು 3 ಲಕ್ಷ ಜೀವಗಳನ್ನು ಬಲಿ ಪಡೆದಿರುವ ಕೋವಿಡ್-19 ಸಾಂಕ್ರಾಮಿಕ ರೋಗವನ್ನು ನಿಭಾಯಿಸಲು ಭಾರತೀಯರಿಗೆ ಸಹಾಯ ಮಾಡಲು ಸೇನೆಯು ಸಿದ್ಧವಾಗಿದೆ ಎಂದು ರಕ್ಷಣಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಭಾನುವಾರ ಹೇಳಿದ್ದಾರೆ.
ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯಲ್ಲಿ ಸಾಮಾಜಿಕ ಸಂಘಟನೆಯೊಂದು ಆಯೋಜಿಸಿದ್ದ ವಿಚಾರ ಸಂಕಿರಣವನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.
ಗ್ರಾಮೀಣ ಪ್ರದೇಶದಲ್ಲಿ ಕೋವಿಡ್-19 ಹರಡುವುದನ್ನು ತಡೆಯಲು, ಜನರು ಒಗ್ಗಟ್ಟಾಗಿ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಸಿದ್ಧರಾಗಿರಬೇಕು ಎಂದು ಜನರಲ್ ರಾವತ್ ಹೇಳಿದರು.
“ದೇಶದ ಜನರಿಗೆ ಸಹಾಯ ಮಾಡಲು ಸೇನೆಯು ಸದಾ ಸಿದ್ಧವಾಗಿದ್ದು, ಅಗತ್ಯ ವೈದ್ಯಕೀಯ ಉಪಕರಣಗಳ ಸಾಗಾಣೆ ಮೂಲಕ ನೆರವು ನೀಡುತ್ತಿದೆ” ಎಂದಿದ್ದಾರೆ.
ಭಾರತದಲ್ಲಿ 2.4 ಲಕ್ಷ ತಾಜಾ ಕೋವಿಡ್ -19 ಪ್ರಕರಣಗಳು ಮತ್ತು 3,741 ಸಾವುಗಳು ಭಾನುವಾರ ದಾಖಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.