ಬೆಂಗಳೂರು: ಕೊರೋನಾ ಸೋಂಕಿತರ ಚಿಕಿತ್ಸೆಗೆ ಬಳಕೆ ಮಾಡುವ ರೆಮ್ಡೆಸಿವಿರ್ ಔಷಧ ಹಂಚಿಕೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ತಂತ್ರಜ್ಞಾನ ಆಧರಿತ ವ್ಯವಸ್ಥೆಯೊಂದನ್ನು ರೂಪಿಸಲಾಗಿದೆ.
ಈ ಸಂಬಂಧ ಮಾತನಾಡಿರುವ ಸಚಿವ ಡಾ ಕೆ ಸುಧಾಕರ್, ಇನ್ನುಮುಂದೆ ಸೋಂಕಿತ ವ್ಯಕ್ತಿಯ ಹೆಸರಿನಲ್ಲಿ ಯಾವ ಆಸ್ಪತ್ರೆಗೆ ಔಷಧ ಹಂಚಿಕೆ ಮಾಡಲಾಗಿದೆ ಎಂಬುದಕ್ಕೆ ಸಂಬಂಧಿಸಿದಂತೆ ದೂರವಾಣಿ ಸಂದೇಶ ರವಾನೆಯಾಗುವಂತೆ ತಂತ್ರಜ್ಞಾನ ರೂಪಿಸಲಾಗಿದೆ. ರೆಮ್ಡೆಸಿವಿರ್ಗಾಗಿ ಸರ್ಕಾರ covidwar.karnataka.gov.in/service 2 ಎಂಬ ಪೋರ್ಟಲ್ ಆರಂಭ ಮಾಡಿದೆ ಎಂದು ತಿಳಿಸಿದ್ದಾರೆ.
ಈ ಪೋರ್ಟಲ್ ಮೂಲಕ ಎಸ್ಆರ್ಎಫ್ ಐಡಿಗೆ ಔಷಧ ಹಂಚಿಕೆಯಾಗಿ, ಅದನ್ನು ಆಸ್ಪತ್ರೆಗಳು ಸೋಂಕಿತ ರೋಗಿಗೆ ಬಳಸದೇ ಹೋದಲ್ಲಿ ಸರ್ಕಾರಕ್ಕೆ ವರದಿ ಮಾಡುವ ಆಯ್ಕೆಯನ್ನು ಸಹ ಸೇರಿಸಲಾಗಿದೆ. ಇದು ಔಷಧಗಳನ್ನು ಅಕ್ರಮವಾಗಿ ಕಾಳಸಂತೆಯಲ್ಲಿ ಮಾರಾಟ ಮಾಡುವುದಕ್ಕೆ ಕಡಿವಾಣ ಹಾಕಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕೊರೋನಾ ಸಂಕಷ್ಟದ ಸಂದರ್ಭದಲ್ಲಿಯೂ ಆರೋಗ್ಯ ಮೂಲಸೌಕರ್ಯಗಳ ವಿಚಾರದಲ್ಲಿ ರಾಜ್ಯ ಸಾಕಷ್ಟು ಪ್ರಗತಿ ಸಾಧಿಸಿದೆ. ಆರ್ಥಿಕ ಸಂಕಷ್ಟದ ನಡುವೆಯೂ ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಗಮನ ಹರಿಸಿದೆ ಎಂದು ಸುಧಾಕರ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.