ಬೆಂಗಳೂರು: ಕರ್ನಾಟಕದಲ್ಲಿ 300 ಕ್ಕೂ ಅಧಿಕ ಮಂದಿ ಕಪ್ಪು ಶಿಲೀಂಧ್ರ ಸೋಂಕಿಗೆ ತುತ್ತಾಗಿರುವ ಬಗ್ಗೆ ಸಮಿತಿ ನೀಡಿದ ಪ್ರಾಥಮಿಕ ವರದಿಯಲ್ಲಿ ತಿಳಿದು ಬಂದಿದೆ ಎಂದು ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ.
ಸೋಂಕಿನ ಮೂಲ ಪತ್ತೆ ಹಚ್ಚಲು ತಜ್ಞರ ಸಮಿತಿ ರಚನೆ ಮಾಡಿದ್ದು, ಈ ಸಮಿತಿ ಸರ್ಕಾರಕ್ಕೆ ವರದಿ ನೀಡಿದೆ. ಸ್ಟಿರಾಯ್ಡ್ ಜೊತೆಗೆ ಹ್ಯುಮಿಡಿಫೈರ್ನಲ್ಲಿ ನಲ್ಲಿ ನೀರು ಬಳಕೆ, ಐಸಿಯು ವೆಂಟಿಲೇಟರ್ಗಳನ್ನು ಇನ್ನೊಬ್ಬರಿಗೆ ಬಳಕೆ ಮಾಡುವುದು, ಒಂದೇ ಮಾಸ್ಕ್ ದೀರ್ಘ ಕಾಲ ಬಳಕೆ, ಟ್ಯೂಬ್, ಹಾಸಿಗೆ ಮೊದಲಾದ ವಿಷಯಗಳಿಂದ ಸೋಂಕು ಹರಡುತ್ತಿದೆ. ಇದನ್ನು ನಿಯಂತ್ರಣ ಮಾಡುವ ಬಗೆಗೂ ತಜ್ಞರು ಈ ವರದಿಯಲ್ಲಿ ಉಲ್ಲೇಖ ಮಾಡಿರುವುದಾಗಿ ತಿಳಿಸಿದ್ದಾರೆ.
ಕೊರೋನಾ ಆಸ್ಪತ್ರೆಗಳಲ್ಲಿ ಕಟ್ಟಡ ಕಾಮಗಾರಿ ನಡೆಸುವಂತಿಲ್ಲ, ಹೊರಗಿನವರು ಆಸ್ಪತ್ರೆಯೊಳಗೆ ಬರುವಂತಿಲ್ಲ. ಪ್ರತಿ ಪಾಳಿ ಮುಗಿದ ಬಳಿಕ ಸ್ವಚ್ಛತೆ, ಉಪಕರಣಗಳನ್ನು ಸ್ವಚ್ಛ ಮಾಡುವುದು, ಕೊರೋನಾದಿಂದ ಗುಣಮುಖರಾದವರಿಗೆ ಇಎನ್ಟಿ ವೈದ್ಯರು 3, 7 ಮತ್ತು 21 ನೇ ದಿನ ತಪಾಸಣೆ ನಡೆಸುವಂತೆ ಸೂಚಿಸಿರುವುದಾಗಿಯೂ ಅವರು ಹೇಳಿದ್ದಾರೆ.
ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿಯೂ ಬ್ಲ್ಯಾಕ್ ಫಂಗಸ್ ಸೋಂಕಿಗೆ ಚಿಕಿತ್ಸೆ ನೀಡಲು ಸರ್ಕಾರ ವ್ಯವಸ್ಥೆ ಮಾಡಿದೆ. ಇದಕ್ಕೆ ಔಷಧಗಳ ಕೊರತೆ ಇದ್ದು, ಶೀಘ್ರದಲ್ಲೇ ಅಗತ್ಯ ಔಷಧಗಳನ್ನು ರಾಜ್ಯಕ್ಕೆ ದೊರಕಿಸಿ ಕೊಡುವಂತೆಯೂ ಕೇಂದ್ರ ಸರ್ಕಾರದ ಜೊತೆ ಚರ್ಚಿಸಲಾಗಿದೆ ಎಂದು ಸಚಿವರು ನುಡಿದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.