ಬೆಂಗಳೂರು: ಕೊರೋನಾ ಲಾಕ್ಡೌನ್ ಹಿನ್ನೆಲೆಯಲ್ಲಿ ಎರಡನೇ ಆರ್ಥಿಕ ಪ್ಯಾಕೇಜ್ ಪರಿಗಣನೆಯಲ್ಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.
ಸದ್ಯ ಕೊರೋನಾ ಪರಿಸ್ಥಿತಿ ನಿಯಂತ್ರಣಕ್ಕೆ ಬರುವ ಲಕ್ಷಣಗಳು ಕಾಣುತ್ತಿದೆ. ಜೊತೆಗೆ ಕೊರೋನಾ ಸೋಂಕಿತರ ಚಿಕಿತ್ಸೆಗೆ ಆಮ್ಲಜನಕಯುಕ್ತ ಹಾಸಿಗೆಗಳು ಸಹ ದೊರೆಯುತ್ತಿದೆ. ಹಾಗೆಯೇ ಬೆಂಗಳೂರು ಸೇರಿದಂತೆ ಇನ್ನಿತರ ಭಾಗಗಳಲ್ಲಿಯೂ ಕೊರೋನಾ ಸೋಂಕಿತರ ಪ್ರಮಾಣ ಕಡಿಮೆಯಾಗುತ್ತಿದೆ. ಗ್ರಾಮೀಣ ಭಾಗಗಳಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿದ್ದು, ಆ ಭಾಗದಲ್ಲಿ ಹೆಚ್ಚು ಜಾಗರೂಕತೆಯಿಂದ ಜನರು ವರ್ತಿಸಬೇಕಾಗಿದೆ ಎಂದು ಅವರು ಹೇಳಿದ್ದಾರೆ.
ಈಗಾಗಲೇ ಒಂದು ಪ್ಯಾಕೇಜ್ ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಸ್ಥಾನ ಪಡೆಯದ ಸಾಮಾನ್ಯ ವರ್ಗಗಳನ್ನು ಗಮನಿಸಿಕೊಂಡು ಎರಡನೇ ಪ್ಯಾಕೇಜ್ನಲ್ಲಿ ಸರಿದೂಗಿಸಲು ಸರ್ಕಾರ ಯೋಚಿಸುತ್ತಿದೆ. ಆದರೆ ಇದೆಲ್ಲವನ್ನೂ ವಿಪಕ್ಷಗಳು ರಾಜಕೀಯ ದುರುದ್ದೇಶಕ್ಕಾಗಿ ಬಳಕೆ ಮಾಡಿಕೊಂಡು ಬೇಕಾಬಿಟ್ಟಿ ಹೇಳಿಕೆ ನೀಡುತ್ತಿವೆ. ಸರ್ಕಾರ ತನ್ನ ಮಿತಿಯಲ್ಲಿ, ಆರ್ಥಿಕ ಸಂಕಷ್ಟದ ನಡುವೆಯೂ ಪ್ಯಾಕೇಜ್ ಘೋಷಣೆ ಮಾಡಿದೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.
ಹಾಗೆಯೇ ಸ್ಲಂ ಸೇರಿದಂತೆ ಎಲ್ಲಿಯೇ ಸೋಂಕಿತರು ಕಂಡು ಬಂದಲ್ಲಿ ಕೊರೋನಾ ಕೇರ್ ಸೆಂಟರ್ ಅಥವಾ ಆಸ್ಪತ್ರೆಗಳಲ್ಲಿ ಅಗತ್ಯ ಚಿಕಿತ್ಸೆ ಪಡೆಯುವಂತೆಯೂ ಅವರು ಮನವಿ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.