ಬೆಂಗಳೂರು: ಕೊರೋನಾ ವಿಚಾರದಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಆಸ್ಪತ್ರೆಗಳಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಕೆ ಕಡ್ಡಾಯಕ್ಕೆ ಸರ್ಕಾರ ಯೋಚಿಸಿದೆ ಎಂದು ಡಾ ಕೆ ಸುಧಾಕರ್ ಹೇಳಿದ್ದಾರೆ.
ಕೊರೋನಾ ಸೋಂಕಿತರ ಸಂಬಂಧಿಗಳು ಆಸ್ಪತ್ರೆಗಳಲ್ಲಿ ಸಿಸಿಟಿವಿ ಅಳವಡಿಸುವಂತೆ ಮನವಿ ಮಾಡುತ್ತಿದ್ದಾರೆ. ಹೀಗಾಗಿ ಆಸ್ಪತ್ರೆಗಳಲ್ಲಿನ ಚಿಕಿತ್ಸೆಯಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಸಿಸಿಟಿವಿ ಕಡ್ಡಾಯಕ್ಕೆ ನಿರ್ಧರಿಸಲಾಗಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಸರ್ಕಾರಿ ಆಸ್ಪತ್ರೆಗಳ ವಾರ್ಡ್ಗಳು, ಐಸಿಯು ಗಳಲ್ಲಿ ಸಿಸಿಟಿವಿ ಅಳವಡಿಸಲು ಸೂಚಿಸಲಾಗಿರುವುದಾಗಿ ಅವರು ತಿಳಿಸಿದ್ದಾರೆ.
ಈ ಹಿಂದೆಯೇ ಸಿಸಿಟಿವಿ ಅಳವಡಿಕೆಗೆ ಸೂಚಿಸಿದ್ದರೂ, ಕೆಲ ಕಡೆಗಳಲ್ಲಿ ಇದರ ಸಮರ್ಪಕ ಅನುಷ್ಠಾನ ಸಾಧ್ಯವಾಗಿಲ್ಲ. ಸೋಂಕಿತರ ಚಿಕಿತ್ಸಾ ಪಾರದರ್ಶಕತೆಯ ಬಗ್ಗೆ ಅವರ ಕುಟುಂಬ ಸದಸ್ಯರಿಗೆ ನಂಬಿಕೆ ಬರಲು, ಹೊರಗಿನವರ ಅನಗತ್ಯ ಓಡಾಟ ತಪ್ಪಿಸುವ ನಿಟ್ಟಿನಲ್ಲಿಯೂ ಈ ಕ್ರಮ ಮಹತ್ವ ಪಡೆಯಲಿದೆ. ಸಿಬ್ಬಂದಿಗಳಿಗೂ ನಿರಾತಂಕವಾಗಿ ಕರ್ತವ್ಯ ನಿರ್ವಹಿಸಲು ಸಾಧ್ಯವಾಗಲಿದೆ ಎಂದು ಸುಧಾಕರ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.