ಬೆಂಗಳೂರು: ಈಗಾಗಲೇ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವ 95% ಗಳಷ್ಟು ಸಿಬ್ಬಂದಿಗೆ ಲಸಿಕೆ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಎರಡನೇ ಹಂತದಲ್ಲಿ ಪೊಲೀಸ್ ಸಿಬ್ಬಂದಿ ಮತ್ತು ಅವರ ಕುಟುಂಬ ಸದಸ್ಯರಿಗೆ ಲಸಿಕೆ ನೀಡಲಾಗುತ್ತದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ರಾಜ್ಯದಲ್ಲಿ ಪೊಲೀಸರು ಮಾತ್ರವಲ್ಲದೆ ಅವರ ಕುಟುಂಬದ ಸದಸ್ಯರನ್ನೂ ಕೊರೋನಾ ಯೋಧರೆಂದು ಪರಿಗಣಿಸಿ ಅವರಿಗೆ ಕೊರೋನಾ ಲಸಿಕೆ ನೀಡಲು ಅಗತ್ಯ ಕ್ರಮವನ್ನು ಸರ್ಕಾರ ಕೈಗೊಳ್ಳಲಿದೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ. ಈ ಸಂಬಂಧ ರಾಜ್ಯದ ಪೊಲೀಸ್ ಮಹಾನಿರ್ದೇಶಕರಿಗೂ ಸರ್ಕಾರ ಸೂಚನೆ ನೀಡಿದೆ ಎಂದು ಅವರು ಹೇಳಿದ್ದಾರೆ.
ರಾಜ್ಯದಲ್ಲಿ ಕೊರೋನಾ ಲಾಕ್ಡೌನ್ ಹಿನ್ನೆಲೆಯಲ್ಲಿ ಪೊಲೀಸರು ಕಾನೂನು, ಸುವ್ಯವಸ್ಥೆ ಕಾಪಾಡುವಲ್ಲಿ ಶ್ರಮಿಸುತ್ತಿದ್ದಾರೆ. ಅವರ ಮತ್ತು ಅವರ ಕುಟುಂಬ ಸದಸ್ಯರ ಆರೋಗ್ಯ ರಕ್ಷಣೆಗೆ ಸರ್ಕಾರ ಈ ಮಹತ್ವದ ತೀರ್ಮಾನ ಕೈಗೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.