ಬೆಂಗಳೂರು: ಜಾನುವಾರುಗಳನ್ನು ಸಾಕುವವರಿಗೆ ಸೂಕ್ತ ಸಲಹೆ, ಸೂಚನೆಗಳನ್ನು ನೀಡುವ ಸಲುವಾಗಿ ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ನಿರ್ಮಾಣ ಮಾಡಲಾದ ಸುಸಜ್ಜಿತ ನೂತನ ವಾರ್ ರೂಂ ಶೀಘ್ರದಲ್ಲೇ ಕಾರ್ಯಾರಂಭ ಮಾಡಲಿದೆ ಎಂದು ಸಚಿವ ಪ್ರಭು ಚೌಹಾಣ್ ತಿಳಿಸಿದ್ದಾರೆ.
ಗೋವುಗಳು, ಜಾನುವಾರುಗಳ ಸಾಕಾಣಿಕೆಗೆ ಸಂಬಂಧಿಸಿದಂತೆ ಸಮಗ್ರ ಮಾಹಿತಿ ನೀಡಲು ಸುಸಜ್ಜಿತ ವಾರ್ ರೂಂ. ರಾಜ್ಯದಲ್ಲಿ ಕಾರ್ಯ ನಿರ್ವಹಿಸಲು ತಯಾರಾಗಿದೆ. ರೈತರು, ಗೋವುಗಳನ್ನು ಸಾಕುವವರು ಈ ಸೇವೆಯ ಅನುಕೂಲ ಪಡೆದುಕೊಳ್ಳಬಹುದಾಗಿದೆ ಎಂದು ಸಚಿವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಜಾನುವಾರುಗಳಿಗೆ ಸಂಬಂಧಿಸಿದಂತೆ ಅವುಗಳ ಆರೋಗ್ಯ, ಸಾಕುವ ವಿಧಾನ, ಆರೋಗ್ಯ ಸಮಸ್ಯೆ, ಚಿಕಿತ್ಸೆ, ಔಷಧೋಪಚಾರ ಮೊದಲಾದವುಗಳ ಬಗ್ಗೆ ತಜ್ಞರು ವಾರ್ ರೂಂ ಮೂಲಕ ಅಗತ್ಯ ಮಾಹಿತಿ ಒದಗಿಸಲಿದ್ದಾರೆ. ದಿನದ 24*7 ಗಂಟೆಗಳ ಕಾಲವೂ ಈ ವಾರ್ ರೂಂ ಕಾರ್ಯ ನಿರ್ವಹಿಸಲಿದೆ. ಇದರ ಮೂಲಕ 4212 ಸಂಸ್ಥೆಗಳು, 2900 ಪಶು ವೈದ್ಯರು, 2200 ಪಶು ವೈದ್ಯಕೀಯ ಸಿಬ್ಬಂದಿ ಸೇವೆ ಒದಗಿಸಲಿದ್ದಾರೆ ಎಂದು ಚೌಹಾಣ್ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.