ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಈಗಷ್ಟೇ ಕಡಿಮೆಯಾಗುತ್ತಿದ್ದಂತೆ ಮೂರನೇ ಅಲೆಯ ಭೀತಿ ಆರಂಭವಾಗಿದೆ. ಜನರ ವರ್ತನೆ, ನಡವಳಿಕೆಗಳ ಮೇಲೆ ಕೊರೋನಾ ಮೂರನೇ ಅಲೆಯ ಪರಿಣಾಮ ಅವಲಂಬಿಸಿದೆ ಎಂದು ಬಿಬಿಎಂಪಿ ಆಯುಕ್ತ ಗೌರವ್ ಗುಪ್ತ ತಿಳಿಸಿದ್ದಾರೆ.
ಕೊರೋನಾ ಎರಡನೇ ಅಲೆಯಲ್ಲಿ ಸಾಕಷ್ಟು ಸಾವು ನೋವುಗಳು ಸಂಭವಿಸಿದೆ. ಸಾರ್ವಜನಿಕರು ಇನ್ನಾದರೂ ಎಚ್ಚೆತ್ತುಕೊಂಡು ಕೊರೋನಾ ಮಾರ್ಗಸೂಚಿಗಳನ್ನು ಪಾಲನೆ ಮಾಡುವುದು, ಜವಾಬ್ದಾರಿಯುತವಾಗಿ ನಡೆದುಕೊಂಡಲ್ಲಿ ಮಾತ್ರವೇ ಕೊರೋನಾ ಮೂರನೇ ಅಲೆಯನ್ನು ನಿಯಂತ್ರಣ ಮಾಡುವುದು ಸಾಧ್ಯ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಮೂರನೇ ಅಲೆಯನ್ನು ತಡೆಯಲು ವಿಶ್ವದ ಹಲವು ರಾಷ್ಟ್ರಗಳು ಪ್ರಯತ್ನ ನಡೆಸುತ್ತಿವೆ. ಆದರೂ ಕೆಲ ದೇಶಗಳಲ್ಲಿ ಹೊಸ ಪ್ರಕರಣಗಳು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ನಾವೆಲ್ಲರೂ ಕೋವಿಡ್ ಕಠಿಣ ನಿಯಮಗಳನ್ನು ಅಳವಡಿಸಿಕೊಳ್ಳಬೇಕು. ಇಲ್ಲವಾದಲ್ಲಿ ಪರಿಸ್ಥಿತಿ ನಿಯಂತ್ರಣ ಕಷ್ಟವಾಗಲಿದೆ ಎಂದು ಅವರು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಟಾಸ್ಕ್ಫೋರ್ಸ್ ಸಹ ರಚನೆ ಮಾಡಲಾಗಿದ್ದು ,ಪೂರ್ವ ಸಿದ್ಧತೆ ಪ್ರಕ್ರಿಯೆಗಳು ಸಹ ಚಾಲ್ತಿಯಲ್ಲಿದೆ ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.