ಬೆಂಗಳೂರು: ಕರ್ನಾಟಕವನ್ನು ಆಮ್ಲಜನಕ ಉತ್ಪಾದನೆಯಲ್ಲಿ ಸ್ವಾವಲಂಬಿಗೊಳಿಸುವ ಉದ್ದೇಶದಿಂದ ಹೊಸ ಆಮ್ಲಜನಕ ಉತ್ಪಾದನಾ ಘಟಕಗಳ ಸ್ಥಾಪನೆಗೆ ಪ್ರೋತ್ಸಾಹ ನೀಡಲು ಕೈಗಾರಿಕಾ ಇಲಾಖೆಯಿಂದ ಉತ್ತೇಜನ ಯೋಜನೆ ಜಾರಿಗೆ ಚಿಂತನೆ ನಡೆದಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಆಮ್ಲಜನಕ ಉತ್ಪಾದನೆ ಮತ್ತು ಸರಬರಾಜಿಗೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿ , ಬಳಿಕ ಮಾತನಾಡಿದ ಅವರು ಆಕ್ಸಿಜನ್ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಜೊತೆಗೆ ನಡೆಸಿದ್ದ ಮಾತುಕತೆ ಸಫಲವಾಗಿದೆ. ರಾಜ್ಯಕ್ಕೆ 1200 ಟನ್ ದ್ರವೀಕೃತ ಆಮ್ಲಜನಕ ಹಂಚಿಕೆ ಮಾಡಲಾಗಿದೆ. ಹಾಗೆಯೇ ರಾಜ್ಯದಲ್ಲಿ ಉತ್ಪಾದನೆಯಾಗುವ ಆಮ್ಲಜನಕವನ್ನು ರಾಜ್ಯದ ಉಪಯೋಗಕ್ಕೆ ಬಳಕೆ ಮಾಡುವಂತೆಯೂ ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ಹೇಳಿದ್ದಾರೆ.
ಹಾಗೆಯೇ ರಾಜ್ಯದಲ್ಲಿ ಹೊಸ ಆಕ್ಸಿಜನ್ ಉತ್ಪಾದನಾ ಘಟಕಗಳ ಆರಂಭಕ್ಕೆ ಮುಂದಾಗುವ ಕೈಗಾರಿಕೋದ್ಯಮಿಗಳಿಗೆ ಆಕರ್ಷಕ ಉತ್ತೇಜನ ನೀಡಲು ಯೋಜನೆ ರೂಪಿಸುವಂತೆಯೂ ಕೈಗಾರಿಕಾ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಈ ಬಗ್ಗೆ ಕೆಲವೇ ದಿನಗಳಲ್ಲಿ ವಿವರವಾಗಿ ಮಾಹಿತಿ ನೀಡುವುದಾಗಿಯೂ ಅವರು ತಿಳಿಸಿದ್ದಾರೆ. ಜೊತೆಗೆ ಎಲ್ಲಾ ಜಿಲ್ಲೆಗಳಲ್ಲೂ ಬಫರ್ ಸ್ಟಾಕ್ ಸಾಮರ್ಥ್ಯ ಹೆಚ್ಚಳಕ್ಕೆ ಯೋಜನೆ ರೂಪಿಸಲಾಗಿದೆ. ತುರ್ತು ಸಂದರ್ಭಗಳಲ್ಲಿ ಅನುಕೂಲಕ್ಕಾಗಿ ಬಫರ್ ಸ್ಟಾಕ್ ಗಳ ಸಾಮರ್ಥ್ಯ ಹೆಚ್ಚಿಸಲು ಯೋಜನೆ ರೂಪಿಸಿರುವುದಾಗಿ ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.