ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಸೂಚನೆಯಂತೆ ರಾಜ್ಯದ ಎಲ್ಲಾ ಸಂಚಾರ ವಿಭಾಗದ ಪೊಲೀಸರಿಗೆ ಸರ್ಕಾರದ ವತಿಯಿಂದ ರೈನ್ ಕೋಟ್ ವಿತರಣೆಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ನಗರದಲ್ಲಿ ಪೊಲೀಸರಿಗೆ ರೈನ್ ಕೋಟ್ ಮತ್ತು ಫೇಸ್ ಶೀಲ್ಡ್ ಸಾಂಕೇತಿಕ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮಳೆ, ಗಾಳಿ, ಚಳಿ ಎನ್ನದೆ ಕರ್ತವ್ಯ ನಿರ್ವಹಿಸುವ ಪೊಲೀಸರ ಸಂಕಷ್ಟ ತಿಳಿದಿದೆ. ಮಳೆಯಲ್ಲಿ ಪೊಲೀಸರಿಗೆ ರಕ್ಷಣೆ ನೀಡುವ ಸಂಬಂಧ ರೈನ್ ಕೋಟ್ ವಿತರಣೆಗೆ ಸರ್ಕಾರ ನಿರ್ಧರಿಸಿದೆ ಎಂದು ಹೇಳಿದ್ದಾರೆ.
ಈ ಸಂದರ್ಭದಲ್ಲಿ ನಗರದಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡುವ ನಿಟ್ಟಿನಲ್ಲಿ 12 ಹೈಸ್ಪೀಡ್ ಕಾರಿಡಾರ್ಗಳ ನಿರ್ಮಾಣ ಮುಂದಿನ ಎಂಟು ತಿಂಗಳಲ್ಲಿ ಸಂಪೂರ್ಣವಾಗಲಿದೆ. ಇದರಿಂದಾಗಿ ಸುಗಮ ಸಂಚಾರ ಸಾಧ್ಯವಾಗಲಿದೆ ಎಂದು ಹೇಳಿದ್ದಾರೆ. ನಗರದ ಪೊಲೀಸ್ ವ್ಯವಸ್ಥೆಯ ಪುನಾರಚನೆಗೂ ಸರ್ಕಾರ ನಿರ್ಧರಿಸಿದೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.