ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದರು. ಭಾರತದ ಕೋವಿಡ್ ಹೋರಾಟಕ್ಕೆ ಫ್ರಾನ್ಸ್ ನೀಡಿದ ಸಹಾಯಕ್ಕಾಗಿ ಮೋದಿ ಮ್ಯಾಕ್ರನ್ ಅವರಿಗೆ ಧನ್ಯವಾದ ಅರ್ಪಿಸಿದರು.
ನಾಯಕರು ಪರಸ್ಪರ ಆಸಕ್ತಿಯ ದ್ವಿಪಕ್ಷೀಯ, ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಬಗ್ಗೆ ಚರ್ಚಿಸಿದರು ಮತ್ತು ಇತ್ತೀಚೆಗೆ ಮುಕ್ತಾಯಗೊಂಡ ಭಾರತ-ಇಯು ನಾಯಕರ ಸಭೆಯ ಸಕಾರಾತ್ಮಕ ಫಲಿತಾಂಶಗಳ ಬಗ್ಗೆ ತಮ್ಮ ತೃಪ್ತಿಯನ್ನು ವ್ಯಕ್ತಪಡಿಸಿದರು ಎಂದು ಮೂಲಗಳು ತಿಳಿಸಿವೆ.
ಸಮತೋಲಿತ ಮತ್ತು ಸಮಗ್ರ ಮುಕ್ತ ವ್ಯಾಪಾರ ಮತ್ತು ಹೂಡಿಕೆ ಒಪ್ಪಂದಗಳು ಮತ್ತು ಭಾರತ-ಇಯು ಸಂಪರ್ಕ ಸಹಭಾಗಿತ್ವಕ್ಕಾಗಿ ಮಾತುಕತೆಗಳನ್ನು ಪುನರಾರಂಭಿಸುವ ಕುರಿತು ಪ್ರಕಟಣೆಗಳು ಸ್ವಾಗತಾರ್ಹ ಹಂತಗಳಾಗಿವೆ ಎಂದು ಎರಡೂ ನಾಯಕರು ಒಪ್ಪಿಕೊಂಡರು ಎನ್ನಲಾಗಿದೆ.
ಇತ್ತೀಚಿನ ವರ್ಷಗಳಲ್ಲಿ ಭಾರತ-ಫ್ರಾನ್ಸ್ ಕಾರ್ಯತಂತ್ರದ ಸಹಭಾಗಿತ್ವವು ಪಡೆದುಕೊಂಡಿರುವ ಆಳ ಮತ್ತು ಬಲದ ಬಗ್ಗೆ ಉಭಯ ನಾಯಕರು ತೃಪ್ತಿ ವ್ಯಕ್ತಪಡಿಸಿದರು ಮತ್ತು ಕೋವಿಡ್ ನಂತರದ ಯುಗದಲ್ಲಿ ಒಟ್ಟಿಗೆ ಕೆಲಸ ಮಾಡುವುದನ್ನು ಮುಂದುವರಿಸಲು ಪರಸ್ಪರ ಒಪ್ಪಿಕೊಂಡರು. ಸನ್ನಿವೇಶಗಳು ಅನುಮತಿಸಿದ ಕೂಡಲೇ ಭಾರತಕ್ಕೆ ಭೇಟಿ ನೀಡುವಂತೆ ಅಧ್ಯಕ್ಷ ಮ್ಯಾಕ್ರನ್ಗೆ ಅವರಿಗೆ ಮೋದಿ ಆಹ್ವಾನ ನೀಡಿದರು ಎಂದು ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.