ಬೆಂಗಳೂರು: ಕೊರೋನಾ ಮೂರನೇ ಅಲೆ ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರಲಿದೆ ಎಂಬ ವರದಿ ಇದ್ದು, ಈ ಹಿನ್ನೆಲೆಯಲ್ಲಿ ಸೋಂಕಿತರ ಚಿಕಿತ್ಸೆಗೆ ವಿಶೇಷ ವಾರ್ಡ್ಗಳ ಸ್ಥಾಪನೆ ಮಾಡಲಾಗುವುದು ಎಂದು ಸಚಿವ ಅರವಿಂದ್ ಲಿಂಬಾವಳಿ ಹೇಳಿದ್ದಾರೆ.
ಕೊರೋನಾ ಮೂರನೇ ಅಲೆಯನ್ನು ಸಮರ್ಥವಾಗಿ ನಿಭಾಯಿಸಲು ಮುಂಬೈ ಮಾದರಿಯ ಸೋಂಕು ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗುವುದು. ಹಾಗೆಯೇ ಮಕ್ಕಳ ಚಿಕಿತ್ಸಾ ಹಿನ್ನೆಲೆಯಲ್ಲಿ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ವಿಶೇಷ ವಾರ್ಡ್ಗಳ ಆರಂಭಕ್ಕೂ ಸರ್ಕಾರ ಕ್ರಮ ವಹಿಸಲಿದೆ ಎಂದು ಅವರು ಹೇಳಿದ್ದಾರೆ.
ಬಿಬಿಎಂಪಿ ಆಸ್ಪತ್ರೆಗಳಲ್ಲಿ ಮುಂದಿನ ದಿನಗಳಲ್ಲಿ ಸರತಿ ಸಾಲು ಕ್ರಮ ಅನುಸರಿಸಲಾಗುವುದು. ತುರ್ತು ಚಿಕಿತ್ಸೆ ಅಗತ್ಯವುಳ್ಳವರಿಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಿಕೊಡಲಾಗುತ್ತದೆ. ರೋಗದ ತೀವ್ರತೆ ಆಧರಿಸಿ ಅವರಿಗೆ ಹಾಸಿಗೆ ಹಂಚಿಕೆ ಮಾಡಲಾಗುತ್ತದೆ ಎಂದು ಲಿಂಬಾವಳಿ ತಿಳಿಸಿದ್ದಾರೆ. ಹಾಗೆಯೇ ಕೊರೋನಾ ವಾರ್ ರೂಂ ಹೆಚ್ಚು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವಂತೆ ಅನೇಕ ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಿರುವುದಾಗಿಯೂ ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.