ಬೆಂಗಳೂರು: ಕೊರೋನಾದಿಂದ ರಾಜ್ಯದಲ್ಲಿ 130 ಮಂದಿ ಶಿಕ್ಷಕರು ಮೃತಪಟ್ಟಿದ್ದು, ಅವರನ್ನು ಅವಲಂಬಿಸಿದ್ದವರಿಗೆ ಅನುಕಂಪದ ನೆಲೆಯಲ್ಲಿ ಹುದ್ದೆಗೆ ನೇಮಕಾತಿ ಪತ್ರಗಳನ್ನು ಸಚಿವ ಎಸ್ ಸುರೇಶ್ ಕುಮಾರ್ ವಿತರಿಸಿದರು.
ಕೊರೋನಾ ಸೋಂಕಿನಿಂದ ಹಲವು ಮಂದಿ ಮೃತರಾಗಿದ್ದಾರೆ. ಇದರಿಂದ ಶಿಕ್ಷಕರನ್ನು ಕಳೆದುಕೊಂಡ ಕುಟುಂಬದ ಜೊತೆಗೆ ವಿದ್ಯಾರ್ಥಿಗಳು ಸಹ ನೋವಿನಲ್ಲಿದ್ದಾರೆ. ಈ ಸಂದರ್ಭದಲ್ಲಿ ಶಿಕ್ಷಕರ ಕುಟುಂಬಗಳಿಗೆ ತಕ್ಷಣದ ಸ್ಪಂದನೆಯಾಗಿ ಅನುಕಂಪದ ನೇಮಕಾತಿಗೆ ಶಿಕ್ಷಣ ಇಲಾಖೆ ಮುಂದಾಗಿದೆ ಎಂದು ಅವರು ಹೇಳಿದ್ದಾರೆ.
ಸಂಕಷ್ಟದ ಈ ಸಂದರ್ಭದಲ್ಲಿ ಆರ್ಥಿಕ ಮುಗ್ಗಟ್ಟು ಅನುಭವಿಸುತ್ತಿರುವ ಕುಟುಂಬ ಸದಸ್ಯರಿಗೆ ಈ ನೇಮಕಾತಿ ಆಸರೆಯಾಗಲಿದೆ. ಇದನ್ನು ಒದಗಿಸುವುದು ನಮ್ಮ ಜವಾಬ್ದಾರಿ ಎಂದು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.