ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿಗೆ ಲಸಿಕೆ ವಿತರಣೆ ಸಂದರ್ಭದಲ್ಲಿ ಎರಡು ಕಂಪೆನಿಗಳ ಲಸಿಕೆಯನ್ನು ಮಿಶ್ರಣ ಮಾಡಲಾಗಿದೆ ಎಂಬ ಯಾವುದೇ ಪ್ರಕರಣಗಳು ವರದಿಯಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಾ ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ.
ರಾಜ್ಯದಲ್ಲಿ ಜನರಿಗೆ ಒಂದೇ ಪ್ರಮಾಣದ ಕೊರೋನಾ ಲಸಿಕೆಗಳ ವಿತರಣೆ ನಡೆಯುತ್ತಿದೆ. ಆರೋಗ್ಯ ಸಿಬ್ಬಂದಿ, ಆರೋಗ್ಯ ಕಾರ್ಯಕರ್ತರು ತಮಗೆ ಸೂಚಿಸಿದ ರೀತಿಯಲ್ಲಿಯೇ ಲಸಿಕೆ ನೀಡುವುದು, ಚಿಕಿತ್ಸೆ ಒದಗಿಸುವ ಕೆಲಸವನ್ನು ನಿಭಾಯಿಸುತ್ತಿದ್ದಾರೆ. ಎರಡು ವಿಭಿನ್ನ ಲಸಿಕೆಗಳನ್ನು ಸೇರಿಸಿ ಯಾರಿಗೂ ಲಸಿಕೆ.ವಿತರಿಸಲಾದ ಬಗ್ಗೆ ಯಾವುದೇ ಪುರಾವೆಗಳು ಸಿಕ್ಕಿಲ್ಲ ಎಂದು ತಿಳಿಸಿದ್ದಾರೆ. ಇಂತಹ ಪ್ರಕರಣಗಳು ಕಂಡುಬಂದಲ್ಲಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಕೊರೋನಾ ಸೋಂಕಿತರಿಗೆ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಲಸಿಕೆಗಳನ್ನು ನೀಡಲಾಗುತ್ತಿದ್ದು, ಆರಂಭಿಕ ಹಂತದಲ್ಲಿ ವೈದ್ಯಕೀಯ ಸಿಬ್ಬಂದಿ, ಕೊರೋನಾ ವಾರಿಯರ್ಸ್ಗಳಿಗೆ ,ಬಳಿಕ 60 ವರ್ಷ ಮೇಲ್ಪಟ್ಟವರಿಗೆ, ಆ ಬಳಿಕ 45 ವರ್ಷ ಮೇಲ್ಪಟ್ಟವರಿಗೆ, ಮತ್ತು ಸದ್ಯ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಒದಗಿಸಲು ಭಾರತ ಸರ್ಕಾರ ಮುಂದೆ ಬಂದಿದ್ದು, ದೇಶಾದ್ಯಂತ ಲಸಿಕೆ ಅಭಿಯಾನ ಯಶಸ್ವಿಯಾಗಿ ನಡೆಯಲು ಸರ್ಕಾರ ಎಲ್ಲಾ ಪ್ರಯತ್ನ ನಡೆಸುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.