ಬೆಂಗಳೂರು: ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ ನೀಡಬೇಕಾದ ಜಿಎಸ್ಟಿ ಪರಿಹಾರದ ಬಾಕಿ ಮೊತ್ತ 11 ಸಾವಿರ ಕೋಟಿ ರೂ. ಗಳನ್ನು ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.
ಈ ಸಂಬಂಧ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಮಾಡಿರುವ ಬೊಮ್ಮಾಯಿ, ಜಿಎಸ್ಟಿ ಸೆಸ್ನಲ್ಲಿ ಬಾಕಿ ಉಳಿದಿರುವ ಮೊತ್ತವನ್ನು ಸಹ ರಾಜ್ಯಕ್ಕೆ ನೀಡುವಂತೆ ತಿಳಿಸಿದ್ದಾರೆ. ಹಾಗೆಯೇ 2021-22 ಕ್ಕೆ ಮುಕ್ತಾಯವಾಗುವ ಜಿಎಸ್ಟಿ ನಷ್ಟ ಪರಿಹಾರ ಒದಗಿಸುವ ಸೌಲಭ್ಯವನ್ನು ಆ ಬಳಿಕವೂ ಮುಂದುವರಿಸುವುದಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸುವಂತೆಯೂ ಅವರು ಬೇಡಿಕೆ ಇರಿಸಿದ್ದಾರೆ.
ದೇಶದೆಲ್ಲೆಡೆ ಕೊರೋನಾ ಸೋಂಕಿನ ಅಟ್ಟಹಾಸ ಜೋರಾಗಿದ್ದು, ಈ ಹಿನ್ನೆಲೆಯಲ್ಲಿ ಕೊರೋನಾ ಚಿಕಿತ್ಸೆಗೆ ಸಂಬಂಧಿಸಿದಂತೆ ವೈದ್ಯಕೀಯ ಪರಿಕರಗಳು, ಆರೋಗ್ಯ ಸೇವೆಗಳ ಮೇಲಿನ ಜಿಎಸ್ಟಿ ದರ ಕಡಿಮೆ ಮಾಡುವಂತೆಯೂ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.