ನವದೆಹಲಿ: ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಮೇಜರ್ ವಿಭೂತಿ ಶಂಕರ್ ಧೌಂಡಿಯಾಲ್ ಅವರ ಪತ್ನಿ ರಾಷ್ಟ್ರ ಸೇವೆಗಾಗಿ ಭಾರತೀಯ ಸೇನೆಗೆ ಸೇರಿಕೊಳ್ಳುವ ಮೂಲಕ ಅಗಲಿದ ತನ್ನ ಪತಿಗೆ ನಿಜವಾದ ಗೌರವವನ್ನು ಸಲ್ಲಿಸಿದ್ದಾರೆ.
ಮೊದಲ ಬಾರಿಗೆ ಸೇನೆಯ ಸಮವಸ್ತ್ರವನ್ನು ಧರಿಸುವ ಮೂಲಕ ಅವರು ಇಂದು ಹೆಮ್ಮೆಯ ಕ್ಷಣವನ್ನು ಅನುಭವಿಸಿದರು.
ಮೇಜರ್ ವಿಭೂತಿ ಶಂಕರ್ ಧೌಂಡಿಯಾಲ್ ಅವರು 2018 ರಲ್ಲಿ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಭಯೋತ್ಪಾದಕ ದಾಳಿಯ ಸಂದರ್ಭದಲ್ಲಿ ಹುತಾತ್ಮರಾಗಿದ್ದರು. ರಾಷ್ಟ್ರಕ್ಕಾಗಿ ಅವರು ಮಾಡಿದ ತ್ಯಾಗಕ್ಕಾಗಿ ಅವರಿಗೆ ಮರಣೋತ್ತರವಾಗಿ ಶೌರ್ಯ ಚಕ್ರವನ್ನು ನೀಡಿ ಗೌರವಿಸಲಾಗಿದೆ.
ಇಂದು, ಅವರ ಪತ್ನಿ ನಿಕಿತಾ ಕೌಲ್ ಅವರು ಭಾರತೀಯ ಸೇನೆಯ ಶ್ರೇಣಿಗೆ ಸೇರುವ ಮೂಲಕ ಪತಿಗೆ ಗೌರವ ಸಲ್ಲಿಸಿದರು. ಆರ್ಮಿ ಕಮಾಂಡರ್ ನಾರ್ದರ್ನ್ ಕಮಾಂಡ್ ಲೆಫ್ಟಿನೆಂಟ್ ಜನರಲ್ ವೈ.ಕೆ.ಜೋಶಿ ಅವರಿಂದ ಸ್ಟಾರ್ ಅನ್ನು ಹೆಗಲ ಮೇಲೆ ಹೊತ್ತುಕೊಂಡು ಅವರು ಹೆಮ್ಮೆ ಪಟ್ಟರು.
#MajVibhutiShankarDhoundiyal, made the Supreme Sacrifice at #Pulwama in 2019, was awarded SC (P). Today his wife @Nitikakaul dons #IndianArmy uniform; paying him a befitting tribute. A proud moment for her as Lt Gen Y K Joshi, #ArmyCdrNC himself pips the Stars on her shoulders! pic.twitter.com/ovoRDyybTs
— PRO Udhampur, Ministry of Defence (@proudhampur) May 29, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.