ನವದೆಹಲಿ: ದೇಶದಲ್ಲಿ ಹೆಚ್ಚಿನ ಕೋವಿಡ್-19 ಲಸಿಕೆಗಳನ್ನು ಲಭ್ಯವಾಗುವಂತೆ ಮಾಡಲು ಭಾರತವು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಲಸಿಕೆ ತಯಾರಕರಾದ ಫೈಝರ್ ಮತ್ತು ಮಾಡರ್ನಾದೊಂದಿಗೆ ಭಾರತ ಸರ್ಕಾರ ನಿಯಮಿತವಾಗಿ ಸಂವಾದ ನಡೆಸುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.
ದೇಶದಲ್ಲಿ ಲಸಿಕೆ ಉತ್ಪಾದನೆಯನ್ನು ಹೆಚ್ಚಿಸಲು ಸರ್ಕಾರವು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ ಮತ್ತು ಈ ಪ್ರಯತ್ನವು ರಾಷ್ಟ್ರೀಯ ಕೋವಿಡ್ ವ್ಯಾಕ್ಸಿನೇಷನ್ ಕಾರ್ಯಕ್ರಮಕ್ಕೆ ಅಗತ್ಯವಾದ ಲಸಿಕೆ ಪ್ರಮಾಣವನ್ನು ಪೂರೈಸಲು ವಿದೇಶಿ ಲಸಿಕೆ ತಯಾರಕರನ್ನು ಆಕರ್ಷಿಸಲಾಗುತ್ತಿರುವ ದೃಢ ಸೂಚನೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.
ಈ ದಿನಾಂಕದ ಪ್ರಕಾರ, ಭಾರತವು ತನ್ನ ಲಸಿಕೆ ಅಭಿಯಾನದಲ್ಲಿ ಕೋವಿಡ್-19 ವಿರುದ್ಧ ಮೂರು ಲಸಿಕೆಗಳನ್ನು ಬಳಸಲಾಗುತ್ತಿದೆ. ಭಾರತದ ಲಸಿಕೆಗಳಲ್ಲಿ ತಯಾರಿಸಿದ ಎರಡು ಲಸಿಕೆಗಳೆಂದರೆ – ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಕೋವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ನ ಕೋವಾಕ್ಸಿನ್.
ರಷ್ಯಾದ ಸ್ಪುಟ್ನಿಕ್ ವಿ ತುರ್ತು ಸಂದರ್ಭಗಳಲ್ಲಿ ನಿರ್ಬಂಧಿತ ಬಳಕೆಗಾಗಿ ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾದಿಂದ (ಡಿಸಿಜಿಐ) ಅನುಮೋದನೆ ಪಡೆದ ಮೂರನೇ ಲಸಿಕೆ ಮತ್ತು ಕೆಲವು ಖಾಸಗಿ ಆಸ್ಪತ್ರೆಗಳಲ್ಲಿ ಇದನ್ನು ಬಳಸಲಾಗುತ್ತಿದೆ, ಇದರ ಲಭ್ಯತೆಯನ್ನು ಮುಂದಿನ ದಿನಗಳಲ್ಲಿ ಹೆಚ್ಚಿಸುವ ನಿರೀಕ್ಷೆಯಿದೆ.
ಲಭ್ಯತೆಯ ನಿರ್ಬಂಧಗಳ ಹೊರತಾಗಿಯೂ, ಭಾರತವು ಕೇವಲ 130 ದಿನಗಳಲ್ಲಿ 20 ಕೋಟಿ ಲಸಿಕೆಡೋಸ್ ಅನ್ನು ನೀಡಿ ಉತ್ತಮ ಸಾಧನೆ ಮಾಡಲಾಗಿದೆ., ಇದು ವಿಶ್ವದ ಮೂರನೇ ಅತಿದೊಡ್ಡ ಲಸಿಕಾ ವ್ಯಾಪ್ತಿಯಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.