ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಲಾಕ್ಡೌನ್ ವಿಸ್ತರಣೆ ಸಂಬಂಧಿಸಿದಂತೆ ಮಂತ್ರಿಮಂಡಲದ ಜೊತೆ ಸಭೆ ನಡೆಸಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈಗಾಗಲೇ ಕೇಂದ್ರ ಗೃಹ ಇಲಾಖೆಯ ಸೂಚನೆಗೆ ಸಂಬಂಧಿಸಿದಂತೆ ಸಚಿವರ ಜೊತೆ ಚರ್ಚೆ ನಡೆಸಲು ಸಿಎಂ ನಿರ್ಧರಿಸಿದ್ದಾರೆ. ಸದ್ಯಕ್ಕೆ ಜೂನ್ 7 ರ ವರೆಗೆ ರಾಜ್ಯದಲ್ಲಿ ಕಠಿಣ ಲಾಕ್ಡೌನ್ ಕ್ರಮ ಜಾರಿಯಲ್ಲಿರಲಿದೆ. ಇದರಲ್ಲಿ ಯಾವ ಬದಲಾವಣೆ ಸಹ ಇಲ್ಲ. ಆದರೆ ಕೇಂದ್ರ ಸರ್ಕಾರ ಜೂನ್ 30 ರ ವರೆಗೆ ಬಿಗಿ ಕ್ರಮಗಳನ್ನು ಅನುಸರಿಸಲು ಹೇಳಿದ್ದು, ಈ ಹಿನ್ನೆಲೆಯಲ್ಲಿ ಸಿಎಂ ಸಭೆ ನಡೆಸಲಿರುವುದಾಗಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಕಡಿಮೆಯಾಗಬೇಕು. ಗ್ರಾಮೀಣ ಭಾಗಗಳಲ್ಲಿಯೂ ಸೋಂಕು ನಿಯಂತ್ರಣ ಆಗಬೇಕು. ಜೊತೆಗೆ ಸಾವಿನ ಸಂಖ್ಯೆ ಕಡಿಮೆಯಾಗಬೇಕು. ಈ ನಿಟ್ಟಿನಲ್ಲಿ ಸೂಕ್ತ ಚಿಕಿತ್ಸೆ ನೀಡಲು ಸರ್ಕಾರ ಕ್ರಮ ಕೈಗೊಂಡಿದೆ. ಕೊರೋನಾ ನಿಯಂತ್ರಣಕ್ಕೆ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.