ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ರಾಜ್ಯ ತೊಂದರೆಗೆ ಈಡಾಗಿದೆ. ಈ ನಿಟ್ಟಿನಲ್ಲಿ ಅನಾಥ ಮಕ್ಕಳ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಮುಂದಾಗಿದೆ.
ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಾಲ ಸೇವೆಯನ್ನು ಘೋಷಣೆ ಮಾಡಿದ್ದು, ಹೆತ್ತವರನ್ನು, ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಅನಾಥ ಮಕ್ಕಳಿಗೆ ಆಶ್ರಯ ನೀಡಲು ಕೇಂದ್ರ ಸರ್ಕಾರ ಸೂಚಿಸಿದೆ. ಅದರಂತೆ ಅನಾಥರಾದ ಮಕ್ಕಳಿಗೆ ನೆರವು, 10 ವರ್ಷದ ಒಳಗಿನ ಪಾಲಕರಿಲ್ಲದ ಮಕ್ಕಳಿಗೆ ನೋಂದಾಯಿತ ಮಕ್ಕಳ ಪಾಲನಾ ಕೇಂದ್ರದಲ್ಲಿ ಪಾಲನೆ, ಅವರ ಶಿಕ್ಷಣಕ್ಕಾಗಿ ವಸತಿ ಶಾಲೆಗಳಲ್ಲಿ ವ್ಯವಸ್ಥೆ, 21 ವರ್ಷ ತುಂಬಿದ ಹೆಣ್ಣು ಮಕ್ಕಳಿಗೆ ಮದುವೆ, ಉನ್ನತ ವಿದ್ಯಾಭ್ಯಾಸ , ಸ್ವ ಉದ್ಯೋಗಕ್ಕಾಗಿ 1 ಲಕ್ಷ ನೆರವು, ಅನಾಥ ಮಕ್ಕಳಿಗೆ ಬಾಲಮಂದಿರಗಳಲ್ಲಿ ಪೋಷಣೆಗೆ ವ್ಯವಸ್ಥೆ, ಅನಾಥ ಮಕ್ಕಳಿಗೆ 3500 ರೂ. ಮಾಸಿಕ ಸಹಾಯಧನ ನೀಡಲು ಸರ್ಕಾರ ಮುಂದಾಗಿದೆ ಎಂದು ಅವರು ಹೇಳಿದ್ದಾರೆ.
ಮಕ್ಕಳ ಸರ್ವತೋಮುಖ ಬೆಳವಣಿಗೆಗಾಗಿ ಸರ್ಕಾರ ಶ್ರಮಿಸಲಿದೆ ಎಂದು ಹೇಳಿದ್ದಾರೆ. ಹಾಗೆಯೇ 10 ನೇ ತರಗತಿ ಮುಗಿಸಿರುವ ಮಕ್ಕಳಿಗೆ ಉನ್ನತ ಶಿಕ್ಷಣಕ್ಕೆ ನೆರವಾಗುವಂತೃ ಲ್ಯಾಪ್ಟಾಪ್ ನೀಡುವುದಾಗಿಯೂ ತಿಳಿಸಿದ್ದಾರೆ. ಕೇಂದ್ರದ ನಿರ್ದೇಶನದಂತೆ ರಾಜ್ಯ ಸರ್ಕಾರ ಈ ಆದೇಶ ಹೊರಡಿಸಿದೆ.
ರಾಜ್ಯದಲ್ಲಿ ಕೊರೋನಾ ಸೋಂಕು ನಿಯಂತ್ರಣ ಮಾಡುವ ಹಿನ್ನೆಲೆಯಲ್ಲಿ ಲಾಕ್ಡೌನ್ ಕ್ರಮ ಕೈಗೊಳ್ಳಲಾಗಿದ್ದು, ಕೊರೋನಾ ಪರಿಸ್ಥಿತಿ ನೋಡಿಕೊಂಡು ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಜನತೆ ಸಹಕರಿಸುವಂತೆ ಮನವಿ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.