ಬೆಂಗಳೂರು: ರಾಜ್ಯದ 1000 ಮಂದಿ ಶುಶ್ರೂಷಕರಿಗೆ ಬ್ರಿಟನ್ ರಾಷ್ಟ್ರೀಯ ಆರೋಗ್ಯ ಇಲಾಖೆಯಿಂದ ಬೇಡಿಕೆ ಬಂದಿದ್ದು, ಕೊರೋನಾ ಸಂಕಷ್ಟ ಮುಗಿದ ಬಳಿಕ ಸಿಬ್ಬಂದಿಗಳನ್ನು ಲಂಡನ್ಗೆ ಕಳುಹಿಸಲಾಗುವುದು ಎಂದು ಡಿಸಿಎಂ ಡಾ ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ.
ಈಗಾಗಲೇ ಕೌಶಲಾಭಿವೃದ್ಧಿ ಇಲಾಖೆ ಮತ್ತು ಎನ್ಎಚ್ಎಸ್ ನಡುವೆ ಈ ಸಂಬಂಧ ಒಪ್ಪಂದ ನಡೆದಿದ್ದು, 1000 ಶುಶ್ರೂಷಕರನ್ನು ಕಳುಹಿಸಿ ಕೊಡುವಂತೆ ಅವರು ವಿನಂತಿಸಿದ್ದಾರೆ. ಅದಕ್ಕೆ ಪೂರಕ ವ್ಯವಸ್ಥೆಯನ್ನು ಸರ್ಕಾರ ಕೈಗೊಳ್ಳಲಿದ್ದು, ಸಿಬ್ಬಂದಿಗಳಿಗೆ ಅಲ್ಲಿನ ವ್ಯವಸ್ಥೆಗೆ ಒಗ್ಗಿ ಕಾರ್ಯ ನಿರ್ವಹಿಸಲು ಅಗತ್ಯವಾದ ಭಾಷೆ, ಸಂವಹನಾ ಕಲೆ ಮೊದಲಾದ ತರಬೇತಿಗಳನ್ನು ನೀಡಲಾಗುವುದು ಎಂದು ಹೇಳಿದ್ದಾರೆ.
ಇನ್ನು ಬ್ರಿಟನ್ ಮಾತ್ರವಲ್ಲದೆ ಇತರ ದೇಶಗಳಿಗೂ ನರ್ಸಿಂಗ್, ಅರೆ ವೈದ್ಯಕೀಯ ಸಿಬ್ಬಂದಿಗಳನ್ನು ಒದಗಿಸುವ ಕೆಲಸ ಮಾಡಲು ಕೌಶಲಾಭಿವೃದ್ಧಿ ಇಲಾಖೆ ಕ್ರಮ ಕೈಗೊಳ್ಳುತ್ತಿದೆ. ಹಾಗೆಯೇ ರಾಜ್ಯದಲ್ಲಿ ನರ್ಸಿಂಗ್ ಸಿಬ್ಬಂದಿಗೆ ಅಧಿಕಾರಿ ಮಟ್ಟದ ಸ್ಥಾನ ನೀಡುವ ಬಗೆಗೂ ನಿರ್ಧರಿಸಲಾಗಿದೆ. ಅವರ ಎಲ್ಲಾ ಬೇಡಿಕೆಗಳ ಈಡೇರಿಕೆಗೂ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.