ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ನಿಗದಿ ಮಾಡಿರುವಂತೆ ಜೂನ್ 7 ರ ವರೆಗೆ ಕಟ್ಟುನಿಟ್ಟಿನ ಲಾಕ್ಡೌನ್ ವ್ಯವಸ್ಥೆ ಜಾರಿಯಲ್ಲಿರಲಿದೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಅದರಂತೆ ಕೇಂದ್ರ ಗೃಹ ಇಲಾಖೆ ತನ್ನ ಸುತ್ತೋಲೆಯಲ್ಲಿ ಜೂನ್ 30 ರ ವರೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ. ಈ ನಿಯಮವನ್ನು ಯಾವ ರೀತಿಯಲ್ಲಿ ಜಾರಿಗೆ ತರಬೇಕು ಎಂಬುದರ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಚಿವರ ಸಭೆಯಲ್ಲಿ ಚರ್ಚೆ ನಡೆಸಿ ಬಳಿಕ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಈ ಸಂಬಂಧ ಮುಖ್ಯಮಂತ್ರಿಗಳು ನಿರ್ಧರಿಸಲಿದ್ದಾರೆ. ಆದರೆ ಜೂನ್ 7 ರ ವರೆಗೆ ಪ್ರಸ್ತುತ ಇರುವ ಕ್ರಮಗಳು ಹಾಗೆಯೇ ಜಾರಿಯಲ್ಲಿರಲಿವೆ. ಅದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಹೇಳಿದ್ದಾರೆ. ಕೊರೋನಾ ನಿಯಂತ್ರಣ ಮಾಡುವ ಹಿನ್ನೆಲೆಯಲ್ಲಿ ಎಲ್ಲರೂ ಸಹಕಾರ ನೀಡುವಂತೆಯೂ ಬೊಮ್ಮಾಯಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.