ನವದೆಹಲಿ: ಭಾರತೀಯ ರೈಲ್ವೆಯು 15 ರಾಜ್ಯಗಳ ವಿವಿಧ ನಗರಗಳಿಗೆ 21, 392 ಟನ್ಗಳಷ್ಟು ದ್ರವ ವೈದ್ಯಕೀಯ ಆಮ್ಲಜನಕವನ್ನು ತಲುಪಿಸುವ ಮೂಲಕ ತುರ್ತು ವೈದ್ಯಕೀಯ ನೆರವು ನೀಡುವಲ್ಲಿ ಮಹತ್ವದ ಮೈಲಿಗಲ್ಲನ್ನು ಸಾಧಿಸಿದೆ.
ಸಾಂಕ್ರಾಮಿಕ ಸಮಯದಲ್ಲಿ ಎಲ್ಲಾ ಅಡೆತಡೆಗಳನ್ನು ಮೆಟ್ಟಿ ನಿಂತು ರೈಲ್ವೆಯು ಹಲವಾರು ಸ್ಥಳಗಳಿಗೆ ದ್ರವ ವೈದ್ಯಕೀಯ ಆಮ್ಲಜನಕವನ್ನು ತಲುಪಿಸಲು 300 ಕ್ಕೂ ಹೆಚ್ಚು ಆಕ್ಸಿಜನ್ ಎಕ್ಸ್ಪ್ರೆಸ್ಗಳನ್ನು ಕಾರ್ಯಾಚರಿಸುತ್ತಿದೆ.
ದ್ರವ ವೈದ್ಯಕೀಯ ಆಮ್ಲಜನಕದ 1,237 ಟ್ಯಾಂಕರ್ಗಳನ್ನು ಹೊತ್ತ 305 ಆಕ್ಸಿಜನ್ ಎಕ್ಸ್ಪ್ರೆಸ್ಗಳು 15 ರಾಜ್ಯಗಳಿಗೆ ತುರ್ತು ವೈದ್ಯಕೀಯ ನೆರವು ನೀಡಿವೆ.
ರೈಲ್ವೆ ಪ್ರಕಾರ, ಶನಿವಾರದವರೆಗೆ ಅದು ಸುಮಾರು 20,770 ಮೆ.ಟನ್ ದ್ರವ ವೈದ್ಯಕೀಯ ಆಮ್ಲಜನಕವನ್ನು ದೇಶದ ವಿವಿಧ ರಾಜ್ಯಗಳಿಗೆ ಒದಗಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.