ನವದೆಹಲಿ: ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ( ಐಸಿಎಂಆರ್) ಮಿಷನ್ ಮೋಡ್ನಲ್ಲಿ ಕಾರ್ಯಾಚರಿಸುತ್ತಿದ್ದು, ದೇಶದಲ್ಲಿ ಕೋವಿಡ್ ಮಾದರಿಗಳ ಪರೀಕ್ಷೆಯನ್ನು ದುಪ್ಪಟ್ಟುಗೊಳಿಸುವತ್ತ ಪ್ರಯತ್ನ ನಡೆಸುತ್ತಿದೆ.
ದಿನಕ್ಕೆ 45 ಲಕ್ಷಕ್ಕೆ ಕೋವಿಡ್ ಪರೀಕ್ಷೆಯನ್ನು ನಡೆಸಲು ಮತ್ತು ಜೂನ್ 30 ರೊಳಗೆ ಗ್ರಾಮೀಣ ಭಾಗದಲ್ಲಿ ಪರೀಕ್ಷೆಯನ್ನು ಬೃಹತ್ ಪ್ರಮಾಣದಲ್ಲಿ ಹೆಚ್ಚಿಸಲು ಪ್ರಯತ್ನಗಳನ್ನು ಐಸಿಎಂಆರ್ ಪ್ರಾರಂಭಿಸಿದೆ.
ಈ ತಿಂಗಳ ಆರಂಭದಲ್ಲಿ, ಐಸಿಎಂಆರ್ ಪರಿಷ್ಕೃತ ಪರೀಕ್ಷಾ ಕಾರ್ಯತಂತ್ರವನ್ನು ರೂಪಿಸಿತ್ತು, ಇದರಡಿ ಆರ್ಟಿ ಪಿಸಿಆರ್ ಮೂಲಕ ಪರೀಕ್ಷೆಯನ್ನು ಸಕ್ರಿಯಗೊಳಿಸಲಾಯಿತು ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಪರೀಕ್ಷೆಯನ್ನು ಹೆಚ್ಚಿಸಲಾಯಿತು.
ಕಳೆದ 17 ತಿಂಗಳುಗಳಲ್ಲಿ, ಭಾರತವು ಕೋವಿಡ್ ವಿರುದ್ಧದ ಹೋರಾಟವನ್ನು ಮುಂದುವರಿಸುತ್ತಿರುವ ಸಂದರ್ಭದಲ್ಲಿ ಐಸಿಎಂಆರ್ ಅನೇಕ ಮೈಲಿಗಲ್ಲುಗಳನ್ನು ಸಾಧಿಸಿದೆ. ಮೇ 7 ರಂದು ಭಾರತ 300 ದಶಲಕ್ಷ ಪರೀಕ್ಷೆಗಳ ಹೆಗ್ಗುರುತನ್ನು ತಲುಪಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.