ನವದೆಹಲಿ: ಮುಂದಿನ ತಿಂಗಳ ವೇಳೆಗೆ ಕೊರೊನಾವೈರಸ್ ವಿರುದ್ಧದ ಲಸಿಕೆ ಕೋವಿಶೀಲ್ಡ್ನ 90 ರಿಂದ 100 ಮಿಲಿಯನ್ ಡೋಸ್ಗಳನ್ನು ತಯಾರಿಸಲು ಮತ್ತು ಪೂರೈಸಲು ಸಾಧ್ಯವಾಗಲಿದೆ ಎಂದು ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್ಐಐ) ಹೇಳಿದೆ.
ಮೇ 29 ರವರೆಗೆ, ಭಾರತವು 187 ಮಿಲಿಯನ್ ಡೋಸ್ ಕೋವಿಶೀಲ್ಡ್ ಮತ್ತು 22.8 ಮಿಲಿಯನ್ ಡೋಸ್ ಸ್ಥಳೀಯವಾಗಿ ಅಭಿವೃದ್ಧಿಪಡಿಸಲಾದ ಕೋವಾಕ್ಸಿನ್ ಸೇರಿದಂತೆ ಒಟ್ಟು 210 ಮಿಲಿಯನ್ ಡೋಸ್ಗಳನ್ನು ತನ್ನ ನಾಗರಿಕರಿಗೆ ನೀಡಿದೆ.
ಸಾಂಕ್ರಾಮಿಕ ರೋಗದಿಂದಾಗಿ ಉಂಟಾದ ವಿವಿಧ ಸವಾಲುಗಳ ನಡುವೆಯೂ ತನ್ನ ನೌಕರರು ದಿನದ 24 ಗಂಟೆಗಳಲ್ಲೂ ಕೆಲಸ ಮಾಡುತ್ತಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರಿಗೆ ಇತ್ತೀಚೆಗೆ ಬರೆದ ಪತ್ರದಲ್ಲಿ ಸೀರಮ್ ಇನ್ಸ್ಟಿಟ್ಯೂಟ್ ತಿಳಿಸಿದೆ.
“ಮೇ ತಿಂಗಳಲ್ಲಿ ನಮ್ಮ ಉತ್ಪಾದನಾ ಸಾಮರ್ಥ್ಯ 6.5 ಕೋಟಿ ಡೋಸೇಜ್ ಆಗಿದ್ದು, ಇದಕ್ಕೆ ಹೋಲಿಸಿದರೆ ಜೂನ್ ತಿಂಗಳಲ್ಲಿ ನಮ್ಮ ಕೋವಿಶೀಲ್ಡ್ ಲಸಿಕೆಯ 9 ರಿಂದ 10 ಕೋಟಿ ಡೋಸ್ಗಳನ್ನು ತಯಾರಿಸಲು ಮತ್ತು ಪೂರೈಸಲು ಸಾಧ್ಯವಾಗಲಿದೆ ಎಂದು ತಿಳಿಸಲು ನಾವು ಸಂತೋಷಪಡುತ್ತೇವೆ” ಎಂದು ಸೀರಮ್ನ ವಕ್ತಾರ ಪ್ರಕಾಶ್ ಕುಮಾರ್ ಸಿಂಗ್ ಪತ್ರದಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ.
ಕೋವಿಡ್-19 ಲಸಿಕೆ ಉತ್ಪಾದನೆಯಲ್ಲಿ ಭಾರತವನ್ನು ‘ಆತ್ಮನಿರ್ಭರ’ವನ್ನಾಗಿ ಮಾಡಲು ಮತ್ತು ಲಸಿಕೆಗಳನ್ನು ದೇಶದ ಜನರಿಗೆ ಲಭ್ಯವಾಗುವಂತೆ ಮಾಡಲು ಮಾಡಿದ ಪ್ರಯತ್ನಗಳಿಗಾಗಿ, ಅಮೂಲ್ಯವಾದ ಮಾರ್ಗದರ್ಶನ ಮತ್ತು ನಿರಂತರ ಬೆಂಬಲಕ್ಕಾಗಿ ಅವರು ಪತ್ರದಲ್ಲಿ ಅಮಿತ್ ಶಾ ಅವರಿಗೆ ಧನ್ಯವಾದಗಳನ್ನು ಅರ್ಪಣೆ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.