ನವದೆಹಲಿ: ಅಫ್ಘಾನಿಸ್ಥಾನ, ಬಾಂಗ್ಲಾದೇಶ ಮತ್ತು ಪಾಕಿಸ್ಥಾನದ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಹಿಂದೂಗಳು, ಸಿಖ್ಖರು, ಬೌದ್ಧರು, ಜೈನರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರಿಂದ ಮೇ 28 ರಂದು ಕೇಂದ್ರ ಸರ್ಕಾರ ಭಾರತದ ಪೌರತ್ವ ಪಡೆಯಲು ಅರ್ಜಿಗಳನ್ನು ಆಹ್ವಾನಿಸಿದೆ.
ಕೇಂದ್ರದ ಈ ನಿರ್ಧಾರದ ಬಗ್ಗೆ ಕಳೆದ ಐದು ವರ್ಷಗಳಿಗಿಂತ ಹೆಚ್ಚು ಕಾಲ ಭಾರತದಲ್ಲಿ ವಾಸಿಸುತ್ತಿರುವ ಅಫ್ಘಾನಿಸ್ಥಾನದ ಹಲವಾರು ಸಿಖ್ ನಿರಾಶ್ರಿತರು ಸಂತೋಷವನ್ನು ವ್ಯಕ್ತಪಡಿಸಿದ್ದಾರೆ.
ವರದಿಯ ಪ್ರಕಾರ, ಈ ನಿರ್ಧಾರಕ್ಕಾಗಿ ಅವರು ಸರ್ಕಾರಕ್ಕೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ.
ಪೌರತ್ವ ನಿಯಮಗಳು, 2009 ರ ನಿಬಂಧನೆಗಳಿಗೆ ಅನುಸಾರವಾಗಿ 1955 ರ ಪೌರತ್ವ ಕಾಯ್ದೆ ಸೆಕ್ಷನ್ 16 ರ ಅಡಿಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಗುಜರಾತ್, ಛತ್ತೀಸ್ಗಢ, ರಾಜಸ್ಥಾನ, ಹರಿಯಾಣದ ಮತ್ತು ಪಂಜಾಬ್ನ ಹಲವು ಜಿಲ್ಲೆಗಳಲ್ಲಿ ವಾಸಿಸುತ್ತಿರುವ ನಿರಾಶ್ರಿತರಿಂದ ಮಾತ್ರ ಅರ್ಜಿ ಆಹ್ವಾನಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.