ಬೆಂಗಳೂರು: ರಾಜ್ಯದಲ್ಲಿ ಕ್ರಮೇಣ ಕೊರೋನಾ ಸೋಂಕಿತರ ಪ್ರಮಾಣದಲ್ಲಿ ಇಳಿಕೆ ಕಂಡು ಬರುತ್ತಿದ್ದು, ಗುಣಮುಖರಾಗುತ್ತಿರುವವರ ಸಂಖ್ಯೆ ಏರಿಕೆಯಾಗುತ್ತಿದ್ದು ಸಾರ್ವಜನಿಕ ವಲಯಕ್ಕೆ ಕೊಂಚ ನಿರಾಳತೆ ನೀಡಿದೆ.
ಕಳೆದ 24 ಗಂಟೆಗಳಲ್ಲಿ 20,378 ಜನರಲ್ಲಿ ಸೋಂಕು ಕಾಣಿಸಿಕೊಂಡ ಬಗ್ಗೆ ವರದಿಯಾಗಿದ್ದು, 28,053 ಜನ ಸೋಂಕಿತರು ಗುಣಮುಖರಾಗಿದ್ದಾರೆ ಎಂದು ತಿಳಿದು ಬಂದಿದೆ. ಮೇ 5 ರಂದು ರಾಜ್ಯದಲ್ಲಿ 52,112 ಸೋಂಕಿತ ಪ್ರಕರಣಗಳು ದಾಖಲಾಗಿದ್ದು, ಆ ಬಳಿಕ ಕ್ರಮೇಣ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ ಯಾಗುತ್ತಿದೆ ಎಂದು ಆರೋಗ್ಯ ಇಲಾಖೆಯ ಮೂಲಗಳು ಹೇಳಿವೆ.
ರಾಜ್ಯದಲ್ಲಿ ಒಟ್ಟಾರೆ 25,87,827 ಮಂದಿ ಸೋಂಕಿತರಿದ್ದು, ರಾಜ್ಯದಲ್ಲಿ ಕೊರೋನಾ ಪಾಸಿಟಿವಿಟಿ ದರ 8.71% ಇದೆ. ಚೇತರಿಕೆಯ ಪ್ರಮಾಣ 85.67% ಗೆ ಏರಿಕೆಯಾಗಿದೆ. ಮರಣ ಪ್ರಮಾಣ 1.10% ಗಳಿಷ್ಟಿದೆ. ಲಾಕ್ಡೌನ್ ಬಳಿಕ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದೆ ಎಂದು ಸರ್ಕಾರ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.