ಬೆಂಗಳೂರು: ಬ್ಲ್ಯಾಕ್ ಫಂಗಸ್ ಸೋಂಕಿಗೆ ಚಿಕಿತ್ಸೆ ನೀಡಲು ಕೇಂದ್ರ ಸರ್ಕಾರ ಬೇರೆ ಬೇರೆ ರಾಜ್ಯಗಳಿಗೆ ಹೆಚ್ಚುವರಿ ಎಂಪೋಟೆರಿಸಿನ್-ಬಿ ವಯಲ್ಸ್ಗಳನ್ನು ಹಂಚಿಕೆ ಮಾಡಿದೆ.
ಒಟ್ಟು 30,100 ಎಂಪೋಟೆರಿಸಿನ್-ಬಿ ವಯಲ್ಸ್ ಹಂಚಿಕೆ ಮಾಡಲಾಗಿದ್ದು, ಇದರಲ್ಲಿ ಕರ್ನಾಟಕಕ್ಕೆ 1,930 ವಯಲ್ಸ್ ದೊರೆತಿದೆ. ಆ ಮೂಲಕ ಈ ವರೆಗೆ ಬ್ಲ್ಯಾಕ್ ಫಂಗಸ್ ಸೋಂಕಿಗೆ ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರ ಒಟ್ಟು 12,710 ವಯಲ್ಸ್ ಔಷಧ ಪಡೆದಂತಾಗಿದೆ.
ಹಲವು ರಾಜ್ಯಗಳಲ್ಲಿನ ಬ್ಲ್ಯಾಕ್ ಫಂಗಸ್ ಸೋಂಕಿನ ಸ್ಥಿತಿಗತಿಗಳನ್ನು ಆಧರಿಸಿಕೊಂಡು ಕೇಂದ್ರ ಈ ಹಂಚಿಕೆ ಕಾರ್ಯ ನಡೆಸುತ್ತಿದೆ. ಮಹಾರಾಷ್ಟ್ರಕ್ಕೆ 5,900, ಗುಜರಾತ್ 5630 ಸೇರಿದಂತೆ ಇನ್ನೂ ಹಲವು ರಾಷ್ಟ್ರಗಳಿಗೆ ಈ ಔಷಧವನ್ನು ಕೇಂದ್ರ ಸರ್ಕಾರ ಹಂಚಿಕೆ ಮಾಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.