ಬೆಂಗಳೂರು: ಸಾರಿಗೆ ಸೇವೆ, ಆಂಬ್ಯುಲೆನ್ಸ್ ಸೇವೆ, ಚಾಲಕರಿಗೆ ಸರ್ಕಾರ ಘೋಷಣೆ ಮಾಡಿರುವ ಪರಿಹಾರಗಳ ಸಂಬಂಧ ಯಾವುದೇ ಸಮಸ್ಯೆಗಳಿದ್ದಲ್ಲಿ ಪರಿಹರಿಸಿಕೊಳ್ಳಲು ಅನುಕೂಲವಾಗುವಂತೆ ಸಾರಿಗೆ ಇಲಾಖೆಯಿಂದ ಪ್ರತ್ಯೇಕ ಸಹಾಯವಾಣಿ ಆರಂಭಿಸಲಾಗಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಸಚಿವ ಲಕ್ಷ್ಮಣ ಸವದಿ, ಕೊರೋನಾ ಸೋಂಕು ತಡೆಯುವ ನಿಟ್ಟಿನಲ್ಲಿ ಸರ್ಕಾರ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಸಾರಿಗೆ, ಆಂಬ್ಯುಲೆನ್ಸ್ ಸೇವೆ, ಚಾಲಕರಿಗೆ ಸರ್ಕಾರ ಘೋಷಣೆ ಮಾಡಿರುವ ಪರಿಹಾರದ ಕುರಿತಂತೆ ಯಾವುದೇ ಸಮಸ್ಯೆಗಳಿದ್ದರೂ ಕೂಡಲೇ ಸ್ಪಂದಿಸಲು ಅನುಕೂಲವಾಗುವಂತೆ ಸಾರಿಗೆ ಇಲಾಖೆಯಿಂದ ಪ್ರತ್ಯೇಕ ಸಹಾಯವಾಣಿ ಆರಂಭಿಸಲಾಗಿದೆ ಎಂದು ತಿಳಿಸಿದ್ದಾರೆ.
ಈ ಸಹಾಯವಾಣಿ ಸಂಖ್ಯೆ 9449863214, ವಿಳಾಸ: ಸಾರಿಗೆ ಆಯುಕ್ತರ ಕಚೇರಿ, 1 ನೇ ಮಹಡಿ, ಬಿಎಂಟಿಸಿ ಸಂಕೀರ್ಣ ಶಾಂತಿನಗರ, ಮಂಗಳೂರು. ಸಾರಿಗೆ ಸೇವೆಯ ಯಾವುದೇ ಸಮಸ್ಯೆ ಇದ್ದರೂ ಸಾರ್ವಜನಿಕರು ಈ ಸಂಖ್ಯೆಗೆ ಕರೆ ಮಾಡುವ ಮೂಲಕ ಪರಿಹಾರ ಪಡೆಯಬಹುದು ಎಂದು ಅವರು ತಿಳಿಸಿದ್ದಾರೆ.
ಕೋವಿಡ್ ಪಿಡುಗನ್ನು ತಡೆಯುವ ಪ್ರಯತ್ನದ ಅಂಗವಾಗಿ ಸರ್ಕಾರ ಹಲವಾರು ಕ್ರಮಗಳನ್ನು ಕೈಗೊಂಡಿದ್ದು, ಸಾರಿಗೆ ಸೇವೆ, ಅಂಬ್ಯುಲೆನ್ಸ್ ಸೇವೆ ಮತ್ತು ಚಾಲಕರಿಗೆ ಸರ್ಕಾರ ಘೋಷಿಸಿರುವ ಪರಿಹಾರ ಇತ್ಯಾದಿಗಳ ಕುರಿತಂತೆ ಯಾವುದೇ ಸಮಸ್ಯೆಗಳಿದ್ದರೆ ಕೂಡಲೇ ಸ್ಪಂದಿಸಲು ಅನುಕೂಲವಾಗುವಂತೆ ಸಾರಿಗೆ ಇಲಾಖೆಯಿಂದ ಪ್ರತ್ಯೇಕ ಸಹಾಯವಾಣಿಯನ್ನು ಪ್ರಾರಂಭಿಸಲಾಗಿದೆ.
1/ pic.twitter.com/k918oqlQn5— Laxman Sangappa Savadi | ಲಕ್ಷ್ಮಣ್ ಸಂಗಪ್ಪ ಸವದಿ (@LaxmanSavadi) May 31, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.