ಬೆಂಗಳೂರು: ರಾಜ್ಯಕ್ಕೆ ಇಂದು ಕೇಂದ್ರ ಸರ್ಕಾರ 1.64 ಲಕ್ಷ ಡೋಸ್ ಕೋವ್ಯಾಕ್ಸಿನ್ ಲಸಿಕೆಯನ್ನು ಪೂರೈಕೆ ಮಾಡಿದೆ ಎಂದು ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ರಾಜ್ಯಕ್ಕೆ ಈ ವರೆಗೆ 15.86 ಲಕ್ಷ ಡೋಸ್ ಕೊರೋನಾ ಲಸಿಕೆ ನೀಡಿದೆ. ರಾಜ್ಯ ಸರ್ಕಾರ 1.94 ಲಕ್ಷ ಡೋಸ್ ಲಸಿಕೆ ಖರೀದಿ ಮಾಡಿದೆ. ಇನ್ನು ಲಭ್ಯವಿರುವ ಕೋವ್ಯಾಕ್ಸಿನ್ ಲಸಿಕೆಗಳನ್ನು 2 ನೇ ಡೋಸ್ ಬಾಕಿ ಇರುವವರಿಗೆ ಆದ್ಯತೆಗೆ ಅನುಗುಣವಾಗಿ ನೀಡಲಾಗುತ್ತದೆ ಎಂದು ಸಚಿವರು ಹೇಳಿದ್ದಾರೆ.
ಕೇಂದ್ರ ಸರ್ಕಾರದಿಂದ ಇಂದು ಕರ್ನಾಟಕಕ್ಕೆ 1.64 ಲಕ್ಷ ಡೋಸ್ ಕೋವ್ಯಾಕ್ಸಿನ್ ಪೂರೈಕೆಯಾಗಿದೆ.
ಒಟ್ಟು ಕೋವ್ಯಾಕ್ಸಿನ್ ಪೂರೈಕೆ: 17.8 ಲಕ್ಷ ಡೋಸ್
ಕೇಂದ್ರ ಸರ್ಕಾರದಿಂದ: 15.86 ಲಕ್ಷ ಡೋಸ್
ರಾಜ್ಯ ಸರ್ಕಾರದ ಖರೀದಿ: 1.94 ಲಕ್ಷ ಡೋಸ್
ಲಭ್ಯವಿರುವ ಕೋವ್ಯಾಕ್ಸಿನ್ ಲಸಿಕೆಯನ್ನು 2ನೇ ಡೋಸ್ ಬಾಕಿ ಇರುವವರಿಗೆ ಆದ್ಯತೆ ಮೇರೆಗೆ ನೀಡಲಾಗುವುದು.
— Dr Sudhakar K (@mla_sudhakar) May 31, 2021
ರಾಜ್ಯದಲ್ಲಿ ಕೊರೋನಾ ಸೋಂಕಿತರ ಪ್ರಮಾಣ ನಿಧಾನವಾಗಿ ಇಳಿಮುಖವಾಗುತ್ತಿದೆ. ಲಾಕ್ಡೌನ್ ಕ್ರಮದಿಂದಾಗಿ ರಾಜ್ಯದಲ್ಲಿ ಕೊರೋನಾ ಸೋಂಕು ಹತೋಟಿಗೆ ರಾಜ್ಯ ಸರ್ಕಾರ ಶ್ರಮಿಸುತ್ತಿದೆ. ಜೂನ್ 7 ರ ವರೆಗೆ ಲಾಕ್ಡೌನ್ ಇರಲಿದ್ದು, ಆ ಬಳಿಕ ಪರಿಸ್ಥಿತಿ ನೋಡಿಕೊಂಡು ಲಾಕ್ಡೌನ್ ವಿಸ್ತರಣೆ ಅಥವಾ ಅಂತ್ಯದ ಬಗ್ಗೆ ಸರ್ಕಾರ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಮೂಲಗಳು ಹೇಳಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.