ನವದೆಹಲಿ: ಕೋವಿಡ್ -19 ವ್ಯಾಕ್ಸಿನೇಷನ್ ಕಾರ್ಯಕ್ರಮದ ಪ್ರಗತಿಯ ಕುರಿತು ಕೇಂದ್ರವು ಸೋಮವಾರ ಪರಿಶೀಲನಾ ಸಭೆ ನಡೆಸಿದ್ದು, ಮನೆಗಳಿಗೆ ಹತ್ತಿರವಿರುವಂತೆ ವ್ಯಾಕ್ಸಿನೇಷನ್ ಕೇಂದ್ರಗಳ ಸಂಖ್ಯೆಯನ್ನು ಹೆಚ್ಚಿಸುವಂತೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಒತ್ತಾಯಿಸಿದೆ.
ಕೋವಿಡ್ ವ್ಯಾಕ್ಸಿನೇಷನ್ ಕೇಂದ್ರಗಳ (ಸಿವಿಸಿ) ಬಳಕೆಗಾಗಿ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸುವಂತೆಯೂ ರಾಜ್ಯಗಳಿಗೆ ಮನವಿ ಮಾಡಲಾಗಿದೆ.
“ಜನಸಾಮಾನ್ಯರ ಮನೆಗಳಿಗೆ ಹತ್ತಿರವಿರುವ ಕೋವಿಡ್ ವ್ಯಾಕ್ಸಿನೇಷನ್ ಕೇಂದ್ರಗಳನ್ನು (ಎನ್ಎಚ್ಸಿವಿಸಿ) ಸ್ಥಾಪಿಸಲು ತಾಣಗಳ ಗುರುತಿಸುವಿಕೆ ಮತ್ತು ಅಸ್ತಿತ್ವದಲ್ಲಿರುವ ಸಿವಿಸಿಯೊಂದಿಗೆ ಸಂಪರ್ಕಿಸುವುದನ್ನೂ ಪುನರುಚ್ಚರಿಸಲಾಗಿದೆ” ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಮೇ ಕೊನೆಯ ವಾರದಲ್ಲಿ ವ್ಯಾಕ್ಸಿನೇಷನ್ ವೇಗವನ್ನು ಹೆಚ್ಚಿಸುವಲ್ಲಿ ರಾಜ್ಯಗಳ ಸಾಮೂಹಿಕ ಪ್ರಯತ್ನವನ್ನು ಶ್ಲಾಘಿಸಿದರು. ಲಸಿಕೆಗಳ ಒಟ್ಟು ಲಭ್ಯತೆಯು ಜೂನ್ನಲ್ಲಿ ಮತ್ತಷ್ಟು ಹೆಚ್ಚಾಗಲಿರುವುದರಿಂದ ವ್ಯಾಕ್ಸಿನೇಷನ್ ವೇಗವನ್ನು ಇನ್ನಷ್ಟು ಹೆಚ್ಚಿಸಲು ಸಾಕಷ್ಟು ಅವಕಾಶವಿದೆ ಎಂದು ಅವರು ಹೇಳಿದ್ದಾರೆ.
ಜೂನ್ನಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 12 ಕೋಟಿಗೂ ಅಧಿಕ ಪ್ರಮಾಣದ ಲಸಿಕೆ ಲಭ್ಯವಿರುತ್ತದೆ ಎಂದು ಕೇಂದ್ರ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.