ನವದೆಹಲಿ: ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಬ್ರಿಕ್ಸ್ (ಬ್ರೆಜಿಲ್, ರಷ್ಯಾ, ಭಾರತ, ಚೀನಾ ಮತ್ತು ದಕ್ಷಿಣ ಆಫ್ರಿಕಾ) ವಿದೇಶಾಂಗ ಮಂತ್ರಿಗಳ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.
ಈ ಸಭೆಯಲ್ಲಿ ನಾಯಕರು ಕೋವಿಡ್-19 ಸಾಂಕ್ರಾಮಿಕ, ಜಾಗತಿಕ ಮತ್ತು ಪ್ರಾದೇಶಿಕ ಕಾಳಜಿ, ಸುಸ್ಥಿರ ಅಭಿವೃದ್ಧಿ ಮತ್ತು ಭಯೋತ್ಪಾದನೆಯನ್ನು ಎದುರಿಸುವ ವಿಷಯಗಳ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲಿದ್ದಾರೆ ಎಂದು ಸರ್ಕಾರ ಹೇಳಿಕೆಯಲ್ಲಿ ತಿಳಿಸಲಾಗಿದೆ.
“ಪ್ರಸ್ತುತದ ಬ್ರಿಕ್ಸ್ ಮುಖ್ಯಸ್ಥನಾಗಿ ಭಾರತವು 2021 ರ ಜೂನ್ 1 ರಂದು ಬ್ರಿಕ್ಸ್ ವಿದೇಶಾಂಗ ವ್ಯವಹಾರಗಳ / ಅಂತರರಾಷ್ಟ್ರೀಯ ಸಂಬಂಧಗಳ ಸಚಿವರ ಸ್ವತಂತ್ರ ಸಭೆಯನ್ನು ಕರೆಯಲಿದೆ” ಎಂದು ವಿದೇಶಾಂಗ ಸಚಿವಾಲಯ ಸೋಮವಾರ ತಿಳಿಸಿತ್ತು.
“ಸಚಿವರುಗಳು ಕೋವಿಡ್-19 ಸಾಂಕ್ರಾಮಿಕ ಪರಿಸ್ಥಿತಿ, ನಮ್ಮ ಸಮಯದ ವೈವಿಧ್ಯಮಯ ಸವಾಲುಗಳನ್ನು ಪರಿಣಾಮಕಾರಿಯಾಗಿ ಎದುರಿಸಲು ಮತ್ತು ಸಮಕಾಲೀನ ವಾಸ್ತವಗಳಿಗೆ ಹೊಂದಿಕೊಳ್ಳುವ ಸಾಮರ್ಥ್ಯವನ್ನು ಹೆಚ್ಚಿಸುವ ಉದ್ದೇಶದಿಂದ ಬಹುಪಕ್ಷೀಯ ವ್ಯವಸ್ಥೆಯನ್ನು ಬಲಪಡಿಸುವ ಮತ್ತು ಸುಧಾರಿಸುವ ಅಗತ್ಯತೆಯ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳುವ ನಿರೀಕ್ಷೆಯಿದೆ. ಜಾಗತಿಕ ಮತ್ತು ಪ್ರಾದೇಶಿಕ ಕಾಳಜಿ, ಸುಸ್ಥಿರ ಅಭಿವೃದ್ಧಿ, ಭಯೋತ್ಪಾದನೆಯನ್ನು ಎದುರಿಸುವ ಜೊತೆಗೆ ಇಂಟ್ರಾ-ಬ್ರಿಕ್ಸ್ ಸಹಕಾರವನ್ನು ಹೆಚ್ಚಿಸುವ ಮಾರ್ಗಗಳನ್ನು ಚರ್ಚಿಸುವುದು ಇದರಲ್ಲಿ ಸೇರಿದೆ”ಎಂದು ಅದು ಹೇಳಿದೆ.
ಸಭೆಯಲ್ಲಿ ಬ್ರೆಜಿಲ್ ವಿದೇಶಾಂಗ ಸಚಿವ ಕಾರ್ಲೋಸ್ ಆಲ್ಬರ್ಟೊ ಫ್ರಾಂಕೊ ಫ್ರಾಂಕ, ರಷ್ಯಾ ವಿದೇಶಾಂಗ ಸಚಿವ ಸೆರ್ಗೆ ಲಾವ್ರೊವ್, ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಮತ್ತು ದಕ್ಷಿಣ ಆಫ್ರಿಕಾದ ವಿದೇಶಾಂಗ ಸಚಿವ ಗ್ರೇಸ್ ನಲೆಡಿ ಮಂದಿಸಾ ಪಾಂಡೋರ್ ಭಾಗವಹಿಸುವ ನಿರೀಕ್ಷೆಯಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.