ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ 2021-22 ನೇ ಸಾಲಿನಲ್ಲಿ ಸಂಪೂರ್ಣ ಆಸ್ತಿ ತೆರಿಗೆಯನ್ನು ಒಂದೇ ಕಂತಿನಲ್ಲಿ ಪಾವತಿ ಮಾಡುವವರಿಗೆ 5% ರಿಯಾಯಿತಿಯನ್ನು ಜೂನ್ 30 ರ ವರೆಗೆ ವಿಸ್ತರಿಸಿ ನಗರಾಭಿವೃದ್ಧಿ ಇಲಾಖೆ ಅಧಿಸೂಚನೆ ಹೊರಡಿಸಿದೆ.
ಸಾಮಾನ್ಯವಾಗಿ ಎಪ್ರಿಲ್, ಮೇ ತಿಂಗಳಲ್ಲಿ ಆಸ್ತಿ ತೆರಿಗೆ ಪಾವತಿ ಮಾಡುವವರಿಗೆ ಮಾತ್ರವೇ 5% ರಿಯಾಯಿತಿ ನೀಡಲಾಗುತ್ತಿತ್ತು. ಆದರೆ ಕೊರೋನಾ, ಲಾಕ್ಡೌನ್ ಕಾರಣದಿಂದ ಬಿಬಿಎಂಪಿ ಆಸ್ತಿ ತೆರಿಗೆಯಲ್ಲಿ ರಿಯಾಯಿತಿ ಪಡೆಯುವ ಅವಧಿಯನ್ನು ಈ ಹಿಂದೆ ಮೇ 31 ರ ವರೆಗೆ ವಿಸ್ತರಣೆ ಮಾಡಿತ್ತು. ಇದೀಗ ಜೂನ್ 30 ರ ವರೆಗೂ 5% ರಿಯಾಯಿತಿ ನೀಡಲಿದೆ ಎಂದು ಹೇಳಿದೆ.
ಲಾಕ್ಡೌನ್ನಿಂದಾಗಿ ಬ್ಯಾಂಕ್ ಗಳಿಗೆ ತೆರಳಿ ಚಲನ್ ಪಡೆದು ತೆರಿಗೆ ಪಾವತಿ ಮಾಡುವವರು ಸಮಸ್ಯೆ ಅನುಭವಿಸುವಂತಾಗಿದೆ. ಆದ್ದರಿಂದ ರಿಯಾಯಿತಿ ಅವಧಿಯನ್ನು ವಿಸ್ತರಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಈ ಕ್ರಮಕ್ಕೆ ಮುಂದಾಗಿರುವುದಾಗಿ ನಗರಾಭಿವೃದ್ಧಿ ಇಲಾಖೆ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.