ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಇಳಿಕೆ ಕಾಣುತ್ತಿದ್ದು, ಸಾರ್ವಜನಿಕ ವಲಯದಲ್ಲಿ ಕೊಂಚ ನಿರಾಳತೆ ಉಂಟು ಮಾಡಿದೆ.
ನಿನ್ನೆ ರಾಜ್ಯದಲ್ಲಿ 14,304 ಜನರಿಗೆ ಕೊರೋನಾ ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. ಈ ಸಂಬಂಧ ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ವರದಿಗಳ ಪ್ರಕಾರ ಕಳೆದ ಇಪ್ಪತ್ತನಾಲ್ಕು ಗಂಟೆಯಲ್ಲಿ 14,304 ಜನರಿಗೆ ಸೋಂಕು ತಗುಲಿದ್ದರೆ, 464 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಹಾಗೆಯೇ ಸುಮಾರು 29,271 ಮಂದಿ ಸೋಂಕಿನಿಂದ ಮುಕ್ತರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ರಾಜ್ಯದಲ್ಲಿ ಕೊರೋನಾ ತಾಂಡವವಾಡುತ್ತಿದ್ದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಲಾಕ್ಡೌನ್ನಂತಹ ಕಠಿಣ ಕ್ರಮ ಜಾರಿಗೊಳಿಸಿತ್ತು. ಲಾಕ್ಡೌನ್ ಬಳಿಕ ಇದೀಗ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದಲ್ಲಿ ಇಳಿಕೆ ಕಂಡುಬಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.