ಬೆಂಗಳೂರು: ಕಳೆದ ಬಾರಿ ಕನಿಷ್ಟ ಬೆಂಬಲ ಬೆಲೆಯಲ್ಲಿ ರೈತರಿಂದ ದಾಖಲೆ ಪ್ರಮಾಣದಲ್ಲಿ ಆಹಾರ ಧಾನ್ಯ ಖರೀದಿ ಮಾಡಿದ್ದು, ಇದಕ್ಕೆ ಸಂಬಂಧಿಸಿದಂತೆ 1067 ಕೋಟಿ ರೂ. ಪಾವತಿಗೆ ಬಾಕಿ ಇದೆ. ಅದರಲ್ಲಿ ತಕ್ಷಣವೇ 250 ಕೋಟಿ ರೂ. ಬಿಡುಗಡೆ ಮಾಡುವಂತೆ ಸಿಎಂ ಬಿಎಸ್ವೈ ಸೂಚಿಸಿದ್ದಾರೆ.
ರಾಜ್ಯದಲ್ಲಿ ಕೃಷಿ ಚಟುವಟಿಕೆಗಳ ಪೂರ್ವಸಿದ್ಧತೆಗೆ ಸಂಬಂಧಿಸಿದಂತೆ ಕೃಷಿ ಸಚಿವ ಬಿ ಸಿ ಪಾಟೀಲ್ ಮತ್ತು ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಿದ ಯಡಿಯೂರಪ್ಪ ಅವರು, ಈ ಆದೇಶ ಹೊರಡಿಸಿದ್ದಾರೆ. ಹಾಗೆಯೇ ಡಿಎಪಿ ಮತ್ತು ಯೂರಿಯಾ ಗಳನ್ನು ಸಕಾಲದಲ್ಲಿ ಪೂರೈಕೆ ಮಾಡುವ ಸಂಬಂಧ ಕೇಂದ್ರ ಸಚಿವರ ಜೊತೆಗೂ ಚರ್ಚೆ ನಡೆಸುವುದಾಗಿ ಅವರು ತಿಳಿಸಿದ್ದಾರೆ.
ಹಾಗೆಯೇ ರಾಜ್ಯದಲ್ಲಿ ಮಳೆಗಾಲದಲ್ಲಿ ಉಂಟಾಗಬಹುದಾದ ಪ್ರವಾಹ ಪರಿಸ್ಥಿತಿಗಳನ್ನು ಎದುರಿಸುವ ನಿಟ್ಟಿನಲ್ಲಿಯೂ ಸಕಲ ಸಿದ್ಧತೆಗಳನ್ನು ಮಾಡಲಾಗುತ್ತಿದೆ. ಎನ್ಡಿಆರ್ಎಫ್, ಎಸ್ಡಿಆರ್ಎಫ್ ಪಡೆಗಳೂ ಸಿದ್ಧವಾಗಿವೆ. ಹಾಗೆಯೇ ಈ ಸಂಬಂಧ ಪಂಚಾಯತ್ ಮಟ್ಟದಲ್ಲಿಯೂ ಕ್ರಿಯಾ ಯೋಜನೆಗಳನ್ನು ಆರಂಭಿಸಲಾಗುತ್ತಿದೆ ಎಂದು ಅಧಿಕಾರಿಗಳು ಯಡಿಯೂರಪ್ಪ ಅವರಿಗೆ ತಿಳಿಸಿದ್ದಾರೆ. ಈ ಸಂಬಂಧ ಎಲ್ಲಾ ಜಿಲ್ಲೆಗಳಲ್ಲೂ ಅಧಿಕಾರಿಗಳು ಕಟ್ಟೆಚ್ಚರ ವಹಿಸುವಂತೆಯೂ ಸಿಎಂ ಸೂಚನೆ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.