ಬೆಂಗಳೂರು: ಕೊರೋನಾ ಮೂರನೇ ಅಲೆಯ ಮುನ್ನೆಚ್ಚರಿಕೆಯಾಗಿ ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿಯೂ ಮಕ್ಕಳ ಚಿಕಿತ್ಸಾ ವಿಭಾಗದ ಅಭಿವೃದ್ಧಿಗೆ ತೀರ್ಮಾನ ಮಾಡಲಾಗಿದೆ ಎಂದು ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ.
ಪ್ರತಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಘಟಕಗಳ ಸ್ಥಾಪನೆ, 70 – 80 ಹಾಸಿಗೆಗಳ ಮಕ್ಕಳ ಚಿಕಿತ್ಸಾ ಘಟಕ, ಮಕ್ಕಳ ತಜ್ಞರು, ನರ್ಸಿಂಗ್ ಸ್ಟಾಫ್ಗಳನ್ನು ಹೆಚ್ಚುವರಿಯಾಗಿ ಪಡೆಯಲು ತೀರ್ಮಾನಿಸಲಾಗಿದೆ. 20 ಹಾಸಿಗೆಗಳ ಮಕ್ಕಳ ವಿಭಾಗವಿದ್ದರೆ ಅದನ್ನು 80 ಹಾಸಿಗೆಗಳಿಗೆ ಏರಿಕೆ ಮಾಡಲಾಗುತ್ತದೆ ಎಂದೂ ಅವರು ತಿಳಿಸಿದ್ದಾರೆ. ಹಾಗೆಯೇ ಸಿಬ್ಬಂದಿಗಳಿಗೆ ತರಬೇತಿ ನೀಡುವ ಸಲುವಾಗಿ ರಾಜೀವ್ ಗಾಂಧಿ ಆರೋಗ್ಯ ವಿವಿ ಯಿಂದ ವ್ಯವಸ್ಥೆ ಮಾಡಲಾಗುತ್ತದೆ ಎಂದು ಅವರು ಹೇಳಿದ್ದಾರೆ.
ಹಾಗೆಯೇ ಎರಡನೇ ಅಲೆಯ ಸಂದರ್ಭದಲ್ಲಿ ಬಂದ ರೂಪಾಂತರ ವೈರಾಣು ಪತ್ತೆಗೆ 5 ವೈದ್ಯಕೀಯ ಕಾಲೇಜು, ಆರೋಗ್ಯ ಇಲಾಖೆಯಡಿ ಮಂಗಳೂರು ವೆನ್ಲಾಕ್, ವಿಜಯಪುರ ಆಸ್ಪತ್ರೆ ಸೇರಿ 7 ಕಡೆಗಳಲ್ಲಿ ಜಿನೋಮಿಕ್ ಲ್ಯಾಬ್ಗಳನ್ನು ಆರಂಭ ಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ. ವೈರಾಣು ಸ್ವಭಾವ ಅಧ್ಯಯನ ನಡೆಸಿ ಅದಕ್ಕೆ ಪೂರಕ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳುವುದಾಗಿಯೂ ಅವರು ತಿಳಿಸಿದ್ದಾರೆ. ಹಾಗೆಯೇ ಬ್ಲ್ಯಾಕ್ ಫಂಗಸ್ಗೂ ಅಗತ್ಯ ಚಿಕಿತ್ಸೆಗೆ ಕ್ರಮ ಕೈಗೊಳ್ಳಲಾಗುತ್ತದೆ. ಔಷಧದ ಕೊರತೆ ನೀಗಿಸುವ ನಿಟ್ಟಿನಲ್ಲಿಯೂ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.