ನವದೆಹಲಿ: ದೇಶದಲ್ಲಿ ಈ ಬಾರಿ ವಾಡಿಕೆಯಷ್ಟು ಮಳೆ ಸುರಿಯಲಿದೆ. ಕೇರಳ, ಕರ್ನಾಟಕಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುವ ಲಕ್ಷಣಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕಳೆದ 50 ವರ್ಷಗಳ ದೀರ್ಘಾವಧಿ ಸರಾಸರಿಗೆ ಹೋಲಿಕೆ ಮಾಡಿದರೆ ಈ ಬಾರಿ ದಕ್ಷಿಣ, ಉತ್ತರ ಮತ್ತು ವಾಯುವ್ಯ ಭಾಗಗಳಲ್ಲಿ ವಾಡಿಕೆಯಷ್ಟು ಮಳೆ ಬೀಳಲಿದೆ. ಮಧ್ಯ ಭಾರತದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾದರೆ ಈಶಾನ್ಯ ಭಾರತದಲ್ಲಿ ಕಡಿಮೆ ಪ್ರಮಾಣದಲ್ಲಿ ಮಳೆಯಾಗಲಿದೆ. ಆದರೆ ಯಾವುದೇ ಭಾಗದಲ್ಲಿ ಮಳೆಯ ಕೊರತೆ ಆಗುವುದಿಲ್ಲ ಎಂದು ಹವಾಮಾನ ಇಲಾಖೆ ಹೇಳಿದೆ.
ಜೂನ್ ನಿಂದ ಸೆಪ್ಟೆಂಬರ್ ವರೆಗೆ ದೀರ್ಘಾವಧಿ ಸರಾಸರಿಯ 101% ಗಳಷ್ಟು ಮಳೆ ಸುರಿಯಲಿದೆ. 4% ಗಳಷ್ಟು ಇದರಲ್ಲಿ ಬದಲಾವಣೆಗಳು ಕಾಣಬಹುದು. ಈ ಬಾರಿಯ ಮುಂಗಾರು ಕೃಷಿ ಕ್ಷೇತ್ರಕ್ಕೆ ಹೆಚ್ಚು ಅನುಕೂಲಕರವಾಗಿದೆ ಎಂದು ಹವಾಮಾನ ಇಲಾಖೆ ಅಭಿಪ್ರಾಯ ವ್ಯಕ್ತಪಡಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.