ಬೆಂಗಳೂರು: ಕೊರೋನಾ ಸಂಕಷ್ಟದಿಂದ ಬಳಲುತ್ತಿರುವ ಚಿತ್ರರಂಗದ ಕಾರ್ಮಿಕರಿಗೆ ರಾಕಿಂಗ್ ಸ್ಟಾರ್ ಯಶ್ ಅವರು ಬಹುದೊಡ್ಡ ಪರಿಹಾರ ಮೊತ್ತ ಘೋಷಣೆ ಮಾಡಿದ್ದಾರೆ.
ಸುಮಾರು 1.5 ಕೋಟಿ ರೂ. ಗಳನ್ನು ಅವರು ಚಿತ್ರರಂಗದ ಕಾರ್ಮಿಕರಿಗೆ ನೀಡುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ತಿಳಿಸಿದ್ದಾರೆ. ‘ಕಣ್ಣಿಗೆ ಕಾಣದ ವೈರಸ್ ಮನುಷ್ಯರ ಜೀವನವನ್ನು ಹೆಚ್ಚು ಕಮ್ಮಿ ಬುಡಮೇಲು ಮಾಡಿದೆ. ಅದರಲ್ಲೂ ಕಳೆದೊಂದು ವರ್ಷದಿಂದ ನನ್ನ ಸಿನೆಮಾ ಕುಟುಂಬ ಅಸಹಾಯಕತೆಯಿಂದ ಕೈಕಟ್ಟಿ ಕುಳಿತಿದೆ. ಹೌದು, ಇದು ಬರೀ ಮಾತನಾಡುವ ಸಮಯವಲ್ಲ. ಸಂಕಷ್ಟದಲ್ಲಿರುವ ಸಿನಿಮಾ ಕುಟುಂಬದ ಜೊತೆ ನಿಲ್ಲುವ ಸಣಯ. ಹಾಗಾಗಿ ಚಿತ್ರರಂಗದ 22 ವಿಭಾಗಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸುಮಾರು 3 ಸಾವಿರಕ್ಕೂ ಹೆಚ್ಚಿರುವ ನಮ್ಮ ಸಿನಿಮಾ ಕಲಾವಿದರು, ತಂತ್ರಜ್ಞರು, ಕಾರ್ಮಿಕರ ಅಧಿಕೃತ ಖಾತೆಗಳಿಗೆ ತಲಾ 5 ಸಾವಿರದಂತೆ ನನ್ನ ಸಂಪಾದನೆಯ ಹಣದಿಂದ ಭರಿಸಲು ನಿರ್ಧರಿಸಿದ್ದೇನೆ’ ಎಂದು ತಿಳಿಸಿದ್ದಾರೆ.
ಈ ಸಂಬಂಧ ನಮ್ಮ ಒಕ್ಕೂಟದ ಅಧ್ಯಕ್ಷರಾದ ಸಾ ರಾ ಗೋವಿಂದ್ ಮತ್ತು ಪ್ರಧಾನ ಕಾರ್ಯದರ್ಶಿ ರವೀಂದ್ರನಾಥ ಅವರ ಜೊತೆಗೂ ಚರ್ಚಿಸಲಾಗಿದೆ. ಸಿನಿಮಾ ಕಾರ್ಮಿಕರ ಅಧಿಕೃತ ಬ್ಯಾಂಕ್ ವಿವರ ತಲುಪಿದ ತಕ್ಷಣವೇ ಇದು ಕಾರ್ಯರೂಪಕ್ಕೆ ಬರಲಿದೆ. ಈ ಸಣ್ಣ ಸಹಾಯ ಎಲ್ಲಾ ಕಷ್ಟಗಳನ್ನು ಪರಿಹರಿಸಬಹುದು ಎಂದಲ್ಲ. ಬದಲಾಗಿ ಶಕ್ತಿ ಇರುವ ಹೃದಯವಂತರು ತಮ್ಮ ತಮ್ಮ ಕ್ಷೇತ್ರದಲ್ಲಿ ಸಂಕಷ್ಟ ಅನುಭವಿಸುವವರಿಗೆ ಹೆಗಲು ಕೊಡಲು ಮುಂದಾದರೆ, ನನ್ನ ಈ ಪ್ರಯತ್ನ ಸಾರ್ಥಕವಾಗುತ್ತದೆ ಎಂದು ಹೇಳಿದ್ದಾರೆ.
#togetherwestand #humanity pic.twitter.com/46FYT9pThz
— Yash (@TheNameIsYash) June 1, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.