ನವದೆಹಲಿ: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾಯಮೂರ್ತಿ ಅರುಣ್ ಕುಮಾರ್ ಮಿಶ್ರಾ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಾಜ್ಯಸಭೆಯ ಉಪ ಸಭಾಪತಿ ಹರಿವಂಶ್, ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ರಾಜ್ಯ ಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಒಳಗೊಂಡ ಸಮಿತಿಯು ಮಿಶ್ರಾ ಅವರ ಹೆಸರನ್ನು ಆಯೋಗದ ಅಧ್ಯಕ್ಷ ಸ್ಥಾನಕ್ಕೆ ಶಿಫಾರಸ್ಸು ಮಾಡಿತ್ತು.
ನೇಮಕಾತಿ ಸಮಿತಿಯು ಸುಪ್ರೀಂಕೋರ್ಟ್ನ ಮಾಜಿ ನ್ಯಾಯಾಧೀಶರಾದ ಅರುಣ್ ಕುಮಾರ್ ಮಿಶ್ರಾ ಹೆಸರನ್ನು ಮಾನವ ಹಕ್ಕುಗಳ ಸಮಿತಿಯ ಮುಖ್ಯಸ್ಥರನ್ನಾಗಿ ಶಿಫಾರಸ್ಸು ಮಾಡಿತ್ತು. ಇವರು 2020 ರಲ್ಲಿ ಸುಪ್ರೀಂಕೋರ್ಟ್ನ ನ್ಯಾಯಾಧೀಶ ಸ್ಥಾನದಿಂದ ನಿವೃತ್ತಿ ಹೊಂದಿದ್ದಾರೆ. 1975 ರಲ್ಲಿ ವಕೀಲರಾಗಿ ನೋಂದಣಿ ಮಾಡಿಕೊಂಡಿದ್ದರು. 1998-99 ರಲ್ಲಿ ಬಾರ್ ಕೌನ್ಸಿಲ್ ಆಫ್ ಇಂಡಿಯಾದ ಕಿರಿಯ ಅಧ್ಯಕ್ಷರಾಗಿಯೂ ಆಯ್ಕೆಯಾಗಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.