ನವದೆಹಲಿ: ಪತ್ರಕರ್ತ, ಅಂಕಣಕಾರ ಸ್ವಪನ್ ದಾಸ್ ಗುಪ್ತ ಅವರನ್ನು ರಾಜ್ಯ ಸಭಾ ಸ್ಥಾನಕ್ಕೆ ಪುನಃ ನಾಮನಿರ್ದೇಶನ ಮಾಡಲಾಗಿದ್ದು, ಈ ಸಂಬಂಧ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ರಘು ಮೊಹಪಾತ್ರ ಅವರ ನಿಧನದಿಂದ ತೆರವಾಗಿದ್ದ ರಾಜ್ಯ ಸಭಾ ಸ್ಥಾನಕ್ಕೆ ಖ್ಯಾತ ವಕೀಲ ಮಹೇಶ್ ಜೇಠ್ಮಲಾನಿ ಅವರನ್ನು ನಾಮನಿರ್ದೇಶನ ಮಾಡಲಾಗಿದೆ. ಇವರ ಅವಧಿ 2024 ರ ಜು. 13 ರ ವರೆಗೆ ಮುಂದುವರಿಯಲಿದೆ.
ಪಶ್ಚಿಮ ಬಂಗಾಳದ ತಾರಕೇಶ್ವರ ವಿಧಾನಸಭಾ ಕ್ಷೇತ್ರದಿಂದ ಸ್ವಪನ್ ದಾಸ್ ಗುಪ್ತ ಅವರು ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, ಕಳೆದ ಮಾರ್ಚ್ನಲ್ಲಿ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆದರೆ ಚುನಾವಣೆಯಲ್ಲಿ ಪರಾಭವಗೊಂಡ ಹಿನ್ನೆಲೆಯಲ್ಲಿ ಸದ್ಯ ಅವರನ್ನು ಮತ್ತೆ ನಾಮನಿರ್ದೇಶನ ಮಾಡಲಾಗಿದೆ. 2022 ಎಪ್ರಿಲ್ ವರೆಗೂ ಅವರು ಈ ಸ್ಥಾನದಲ್ಲಿ ಮುಂದುವರಿಯಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.