ನವದೆಹಲಿ: ಎಲ್ಒಸಿಯಲ್ಲಿ ಭಾರತ ಮತ್ತು ಶತ್ರು ರಾಷ್ಟ್ರ ಪಾಕಿಸ್ಥಾನದ ನಡುವಿನ ಕದನ ವಿರಾಮ 100 ನೇ ದಿನಕ್ಕೆ ಕಾಲಿಟ್ಟಿದ್ದು, ಈ ಹಿನ್ನೆಲೆಯಲ್ಲಿ ಭೂ ಸೇನಾ ಲೆಫ್ಟಿನೆಂಟ್ ಜನರಲ್ ಮನೋಜ್ ಮುಕುಂದ ನರವಾಣೆ ಬುಧವಾರದಿಂದ ಎರಡು ದಿನಗಳ ಭೇಟಿ ಹಮ್ಮಿಕೊಂಡಿದ್ದಾರೆ.
ಭಯೋತ್ಪಾದನೆ ನಿಗ್ರಹ ಕಾರ್ಯಾಚರಣೆ, ಗಡಿಯಲ್ಲಿನ ಪರಿಸ್ಥಿತಿಗಳನ್ನು ನರವಾಣೆ ಪರಿಶೀಲನೆ ನಡೆಸಲಿದ್ದಾರೆ. ಫೆಬ್ರವರಿ ತಿಂಗಳ ಕೊನೆಯಲ್ಲಿ ಭಾರತ ಮತ್ತು ಪಾಕಿಸ್ಥಾನದ ಮಿಲಿಟರಿ ಕಾರ್ಯಾಚರಣೆಯ ಮಹಾ ನಿರ್ದೇಶಕರ ಮಾತುಕತೆ ಮೂಲಕ ಕದನ ವಿರಾಮ ಘೋಷಿಸಲಾಗಿತ್ತು. ಆ ಬಳಿಕ ಈ ವರೆಗೆ ಉಭಯ ದೇಶಗಳಿಂದ ಕದನ ವಿರಾಮ ಉಲ್ಲಂಘನೆಯಾಗಿಲ್ಲ.
ಸೇನಾ ಮುಖ್ಯಸ್ಥರು ಸೇನೆಯ ಇನ್ನಿತರ ಮುಖ್ಯ ಕಮಾಂಡರ್ಗಳ ಜೊತೆಗೆ ಕಣಿವೆಯಲ್ಲಿ ಭಯೋತ್ಪಾದನೆ ನಿಗ್ರಹ ಮತ್ತು ಒಳನುಸುಳುವಿಕೆಯ ನೈಜ ಸ್ಥಿತಿಗತಿಗಳ ಅವಲೋಕನ ನಡೆಸಲಿದ್ದಾರೆ ಎಂದು ಸೇನಾ ಮೂಲಗಳು ಹೇಳಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.