ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ವೈದ್ಯಕೀಯ ಸಂಸ್ಥೆಗಳ ಕೊರೋನಾ ಟೆಸ್ಟಿಂಗ್ ಲ್ಯಾಬ್ಗಳಲ್ಲಿ ಕಾರ್ಯ ನಿರ್ವಹಿಸುವ ಗುತ್ತಿಗೆ ಆಧಾರದ ಸಿಬ್ಬಂದಿಗಳಿಗೆ ಅಪಾಯ ಭತ್ಯೆ ಒದಗಿಸಲು ರಾಜ್ಯ ಸರ್ಕಾರ ಮುಂದಾಗಿದೆ.
ಗ್ರೂಪ್ ಡಿ ನೌಕರರಿಗೆ 10 ಸಾವಿರ, ದಾದಿಯರಿಗೆ 8 ಸಾವಿರ, ಸಂಶೋಧನಾ ವಿಜ್ಞಾನಿಗಳು, ಸಂಶೋಧನಾ ಸಹಾಯಕರು, ಪ್ರಯೋಗಾಲಯದ ತಂತ್ರಜ್ಞರು, ದತ್ತಾಂಶಗಳನ್ನು ದಾಖಲೀಕರಣ ಮಾಡುವವರಿಗೆ 5 ಸಾವಿರ ಮಾಸಿಕ ಅಪಾಯ ಭತ್ಯೆ ನೀಡಲು ಸರ್ಕಾರ ನಿರ್ಧರಿಸಿರುವುದಾಗಿ ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ.
ಸರ್ಕಾರಿ ವೈದ್ಯಕೀಯ ಸಂಸ್ಥೆಗಳ ಕೊರೋನಾ ಪರೀಕ್ಷಾ ಪ್ರಯೋಗಾಲಯಗಳಲ್ಲಿ 922 ಗುತ್ತಿಗೆ ನೌಕರರು ಕಾರ್ಯ ನಿರ್ವಹಿಸುತ್ತಿದ್ದು, ಅವರನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ.
ಸರ್ಕಾರಿ ವೈದ್ಯಕೀಯ ಸಂಸ್ಥೆಗಳ ಕೋವಿಡ್ ಲ್ಯಾಬ್ ಗಳ 922 ಗುತ್ತಿಗೆ ನೌಕರರಿಗೆ ಸರ್ಕಾರದಿಂದ ಮಾಸಿಕ ಅಪಾಯ ಭತ್ಯೆ ಘೋಷಿಸಲಾಗಿದೆ. ಸಂಶೋಧನಾ ವಿಜ್ಞಾನಿ, ಸಹಾಯಕ, ಲ್ಯಾಬ್ ತಂತ್ರಜ್ಞ, ಡೇಟಾ ಎಂಟ್ರಿ ಆಪರೇಟರ್ಗಳಿಗೆ ₹5,000, ದಾದಿಯರಿಗೆ ₹8000, ಡಿ ಗ್ರೂಪ್ ನೌಕರರಿಗೆ ₹10,000 ನಿಗದಿಪಡಿಸಲಾಗಿದೆ.@CMofKarnataka @mla_sudhakar pic.twitter.com/5DDZehxhDW
— DIPR Karnataka (@KarnatakaVarthe) June 2, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.