ಬೆಂಗಳೂರು: ರಾಜ್ಯದ ಲಾಕ್ಡೌನ್ ವಿಸ್ತರಣೆಗೆ ಸಂಬಂಧಿಸಿದಂತೆ ಜೂನ್ 5 ರ ಬಳಿಕ ಪರಿಸ್ಥಿತಿಗಳನ್ನು ಅವಲೋಕಿಸಿ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಕೊರೋನಾ ಪರಿಸ್ಥಿತಿಗಳ ಅವಲೋಕನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಜಿಲ್ಲೆಗಳಿಗೆ ಭೇಟಿ ನೀಡುತ್ತಿದ್ದಾರೆ. ಅದರಂತೆ ಜೂ. 4 ರಂದು ಅವರು ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಸ ಮಾಡಲಿದ್ದಾರೆ. ಈಗಾಗಲೇ ಕೆಲ ಜಿಲ್ಲೆಗಳಲ್ಲಿ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ. ಮತ್ತೆ ಕೆಲ ಜಿಲ್ಲೆಗಳಲ್ಲಿ ಕಡಿಮೆ ಆಗಬೇಕಿದೆ. ಈ ಸಂಬಂಧ ತಜ್ಞರು ನೀಡುವ ವರದಿಯನ್ನು ಆಧರಿಸಿ ಲಾಕ್ಡೌನ್ ವಿಸ್ತರಣೆ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.
ಇನ್ನು ಸಂಭಾವ್ಯ ಕೊರೋನಾ ಮೂರನೇ ಅಲೆಯ ನಿಯಂತ್ರಣ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸರ್ಕಾರ ಶಕ್ತಿ ಮೀರಿ ಸಿದ್ಧತೆ ನಡೆಸುತ್ತಿದೆ. ಈಗಾಗಲೇ ರಾಜ್ಯದಲ್ಲಿ 24 ಸಾವಿರಕ್ಕೂ ಅಧಿಕ ಆಕ್ಸಿಜನ್ ಹಾಸಿಗೆಗಳನ್ನು ಸಿದ್ಧಪಡಿಸಲಾಗಿದೆ. 100% ಗಳಷ್ಟು ವೆಂಟಿಲೇಟರ್ಗಳನ್ನು ಸಹ ಹೆಚ್ಚಿಸಲಾಗಿದೆ ಎಂದಿದ್ದಾರೆ. ಪ್ರತಿ ಜಿಲ್ಲಾ ಮತ್ತು ತಾಲೂಕು ಕೇಂದ್ರದಲ್ಲಿ ಆಕ್ಸಿಜನ್ ಜನರೇಟರ್ ವ್ಯವಸ್ಥೆ ಮಾಡುವಂತೆ ಸೂಚಿಸಲಾಗಿದೆ. ಹಾಗೆಯೇ ಜುಲೈ, ಆಗಸ್ಟ್ ತಿಂಗಳುಗಳಲ್ಲಿ ದೊಡ್ಡ ಪ್ರಮಾಣದಲ್ಲಿ ವ್ಯಾಕ್ಸಿನೇಷನ್ ಪ್ರಕ್ರಿಯೆ ಸಹ ನಡೆಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.