ನವದೆಹಲಿ: ಕಳೆದ ಕೆಲವು ದಿನಗಳಿಂದ ಕೊರೋನಾವೈರಸ್ ಪ್ರಕರಣಗಳ ದೈನಂದಿನ ಸಂಖ್ಯೆಯಲ್ಲಿ ಕುಸಿತ ಮುಂದುವರೆದಿತ್ತು, ಆದರೆ ನಿನ್ನೆ ಮೊನ್ನೆಗಿಂತ ತುಸು ಏರಿಕೆ ಕಂಡಿದೆ. ಕಳೆದ 24 ಗಂಟೆಗಳಲ್ಲಿ ಭಾರತವು 1,34,154 ಹೊಸ ಕೋವಿಡ್-19 ಸೋಂಕುಗಳನ್ನು ವರದಿ ಮಾಡಿದೆ. ಬುಧವಾರ, ಕರೋನವೈರಸ್ ಪ್ರಕರಣಗಳ ಸಂಖ್ಯೆ 1,32,788 ಆಗಿತ್ತು. ಹೊಸ ಪ್ರಕರಣಗಳ ಸೇರ್ಪಡೆಯೊಂದಿಗೆ, ದೇಶದಲ್ಲಿ ಈಗ ಒಟ್ಟು ಪ್ರಕರಣಗಳ ಸಂಖ್ಯೆ 2,84,41,986ಕ್ಕೆ ತಲುಪಿದೆ.
ಇಂದು ಬೆಳಿಗ್ಗೆ 9 ಗಂಟೆಗೆ ಬಿಡುಗಡೆಯಾದ ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿಯ ಪ್ರಕಾರ, ಕಳೆದ 24 ಗಂಟೆಗಳಲ್ಲಿ ಒಟ್ಟು 2,11,499 ಡಿಸ್ಚಾರ್ಜ್ಗಳು ಮತ್ತು 2,887 ಸಾವುಗಳು ಸಂಭವಿಸಿವೆ.
ಕಳೆದ 24 ಗಂಟೆಗಳಲ್ಲಿ ದಾಖಲಾದ ಕೋವಿಡ್-19 ಸಾವುಗಳು ಸುಮಾರು 35 ದಿನಗಳ ಕನಿಷ್ಠ ಮಟ್ಟಕ್ಕೆ ಇಳಿದಿದ್ದು, 2,887 ಜನರು ಬಲಿಯಾಗಿದ್ದಾರೆ. ಇದರೊಂದಿಗೆ ದೇಶದಲ್ಲಿ ಸಾವಿನ ಸಂಖ್ಯೆ 3,37,989 ಕ್ಕೆ ತಲುಪಿದೆ.
ಒಟ್ಟು ಚೇತರಿಕೆ ಸಂಖ್ಯೆ ಈಗ 2,63,90,584 ತಲುಪಿದೆ ಮತ್ತು ಚೇತರಿಕೆ ದರ 92.79% ರಷ್ಟಿದೆ.
ಕೋವಿಡ್ -19 ಗಾಗಿ ಭಾರತವು ಈವರೆಗೆ 35,37,82,648 ಮಾದರಿಗಳನ್ನು ಪರೀಕ್ಷಿಸಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಿಳಿಸಿದೆ. ಈ ಪೈಕಿ 21,59,873 ಮಾದರಿಗಳನ್ನು ಬುಧವಾರ ಪರೀಕ್ಷಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.