ಬೆಂಗಳೂರು: ನಗರದಲ್ಲಿ ಮಳೆ ವಿಕೋಪ ತಡೆಯಲು ಕೈಗೊಳ್ಳಲಾಗಿರುವ ಮುಂಜಾಗ್ರತಾ ಕ್ರಮಗಳ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪರಿಶೀಲನೆ ನಡೆಸಿದರು.
ನಗರದ ಎಂಟು ವಲಯಗಳಲ್ಲಿ ಶಾಶ್ವತ ನಿಯಂತ್ರಣ ಕೊಠಡಿಗಳ ಜೊತೆಗೆ 63 ತಾತ್ಕಾಲಿಕ ನಿಯಂತ್ರಣ ಕೊಠಡಿಗಳನ್ನು ಸಹ ಸ್ಥಾಪಿಸಲಾಗಿದೆ. ದಿನದ 24 ಗಂಟೆಯೂ ಇವುಗಳು ಕಾರ್ಯ ನಿರ್ವಹಿಸಲಿದ್ದು, ಅನ್ ಸ್ಕಿಲ್ಡ್ ಕೂಲಿಗಳು, ಮೇಲ್ವಿಚಾರಕರು ಮತ್ತು ರಕ್ಷಣೆ, ಪರಿಹಾರ ಕಾರ್ಯಾಚರಣೆಗಳಿಗೆ ಅಗತ್ಯ ಪರಿಕರಗಳನ್ನು ಸಂಗ್ರಹಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ರಸ್ತೆ ಬದಿಗಳಲ್ಲಿ ಇರುವ ಮಳೆ ನೀರು ಹೋಗುವ ಚರಂಡಿಗಳನ್ನು ಹೂಳು ತೆಗೆದು ಸ್ವಚ್ಛ ಗೊಳಿಸುವುದು, ಅಡ್ಡ ಮೋರಿಗಳ ಹೂಳು ತೆಗೆಯುವುದು, ರಾಜ ಕಾಲುವೆಗಳನ್ನು ಸಂಪರ್ಕಿಸುವ ಚರಂಡಿಗಳನ್ನು ಗುರುತಿಸಿ ಸುವ್ಯವಸ್ಥೆಯಲ್ಲಿ ಇರುವಂತೆ ಕ್ರಮ ವಹಿಸಲು ಸೂಚಿಸಿರುವುದಾಗಿಯೂ ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.