ಬೆಂಗಳೂರು: ಕೋವಿಡ್ 2ನೇ ಅಲೆಯಿಂದ ಸಂಕಷ್ಟದಲ್ಲಿರುವ ರಾಜ್ಯದ ವಿವಿಧ ವರ್ಗಗಳಿಗೆ 500 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ಎರಡನೇ ಬೆಂಬಲ ಪ್ಯಾಕೇಜ್ ಪ್ರಕಟಿಸಿದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಅಭಿನಂದಿಸಿದ್ದಾರೆ.
ಕೆಲವೇ ದಿನಗಳ ಹಿಂದೆ 1,250 ಕೋಟಿ ರೂಪಾಯಿಯ ಮೊದಲನೇ ಬೆಂಬಲ ಪ್ಯಾಕೇಜ್ ನೀಡಲಾಗಿತ್ತು. ಈಗ ಸಂಕಷ್ಟದಲ್ಲಿರುವ ಪವರ್ ಲೂಮ್, ಚಲನಚಿತ್ರೋದ್ಯಮ, ದೂರದರ್ಶನ ಮಾಧ್ಯಮದವರಿಗೆ, ಮೀನುಗಾರರು, ಇನ್ ಲ್ಯಾಂಡ್ ದೋಣಿ ಮಾಲೀಕರು, ಸಿ ವರ್ಗದ ದೇವಸ್ಥಾನದ ಅರ್ಚಕರು, ಅಡುಗೆ ಕೆಲಸ, ಸಹಾಯಕರು, ಮಸೀದಿ ಫೇಶಿಮಾಂ ಮತ್ತಿ ಮೌಂಜನ್, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರು ಮತ್ತು ಅನುದಾನಿತ ಖಾಸಗಿ ಶಾಲಾ ಶಿಕ್ಷಕರು ಸೇರಿ ಹಲವು ವರ್ಗದವರಿಗೆ ನೆರವು ಪ್ರಕಟಿಸಲಾಗಿದೆ ಎಂದು ತಿಳಿಸಿದ್ದಾರೆ.
ಕೈಗಾರಿಕೆಗಳ ಫಿಕ್ಸೆಡ್ ವಿದ್ಯುತ್ ಬಿಲ್ ಪಾವತಿ ವಿನಾಯಿತಿ ಮಾಡಿದ್ದು, ನ್ಯಾಯವಾದಿಗಳ ಕಲ್ಯಾಣ ನಿಧಿಗೆ 5 ಕೋಟಿ ನೆರವು ಪ್ರಕಟಿಸಿದ್ದಾರೆ. ಈ ಮೂಲಕ ಮುಖ್ಯಮಂತ್ರಿಗಳು ಸಂಕಷ್ಟದಲ್ಲಿರುವವರಿಗೆ ಆತ್ಮಸ್ಥೈರ್ಯ ತುಂಬಿದ್ದಾರೆ ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.